--Ads--

ಮೊಬೈಲ್ ಕ್ಲಿನಿಕ್ ಗೆ ಸಚಿವ  ಮುನಿಯಪ್ಪ ಚಾಲನೆ

On: June 18, 2024 10:07 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಮೊಬೈಲ್ ಕ್ಲಿನಿಕ್ ಗೆ ಸಚಿವ  ಮುನಿಯಪ್ಪ ಚಾಲನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್. 18 :- ವೋಲ್ವೋ ಗ್ರೂಪ್ ಹಾಗೂ ನಾರಾಯಣ ಹೆಲ್ತ್ ಸಹಯೋಗದಲ್ಲಿ ಸಿಎಸ್ ಆರ್ ಯೋಜನೆಯಡಿ ಒದಗಿಸಿರುವ ಸoಚಾರಿ ಆರೋಗ್ಯ ವಾಹನಕ್ಕೆ ದೇವನಹಳ್ಳಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.


‘ವೆಲ್ ನೆಸ್ ಆನ್ ವ್ಹೀಲ್ಸ್’ ಎಂಬ ಪರಿಕಲ್ಪನೆಯಲ್ಲಿ ಪ್ರಾರಂಭಗೊಂಡ ಸಂಚಾರಿ ಸಮುದಾಯ ಆರೋಗ್ಯ ಕೇಂದ್ರವು ಕಾನ್ಸರ್, ಹೃದಯ ಸಂಬಂಧಿ ಸಮಸ್ಯೆಗಳು, ರೋಗನಿರ್ಣಯ ಸಮಸ್ಯೆಗಳಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ನೂತನ ಮೈಲಿಗಲ್ಲು ಸೃಷ್ಟಿಸಲಿದೆ. ಗ್ರಾಮೀಣ ಪ್ರದೇಶದ ಜನರಿಗೂ ಗುಣಮಟ್ಟದ ವೈದ್ಯಕೀಯ ಸೌಲಭ್ಯ, ಚಿಕಿತ್ಸೆ ದೊರಕಿಸುವುದು ಇದರ ಉದ್ದೇಶ.

ಈ ಸಂದರ್ಭದಲ್ಲಿ ಸಚಿವರು ಸಂಚಾರಿ ಸಮುದಾಯ ಆರೋಗ್ಯ ಕೇಂದ್ರ ವಾಹನದೊಳಗೆ ತೆರಳಿ ಕಾರ್ಯ ವಿಧಾನದ ಬಗ್ಗೆ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುನೀಲ್ ಕುಮಾರ್, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಶಾಂತಕುಮಾರ್, ಸ್ಥಳೀಯ ಸಂಸ್ಥೆಗಳ ಮುಖಂಡರು, ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now