ನಾಡಪ್ರಭು ಕೆಂಪೇಗೌಡರ ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಿದ  ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…

*ನಾಡಪ್ರಭು ಕೆಂಪೇಗೌಡರ 515 ನೇ ಜಯಂತ್ಯೋತ್ಸವ*

ಕೆಂಪೇಗೌಡರ ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಿದ  ಸಚಿವ ಕೆ.ಹೆಚ್ ಮುನಿಯಪ್ಪ

 

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್.27 :- ಬೆಂಗಳೂರು ನಿರ್ಮಾತೃ ಕೆಂಪೇಗೌಡರ 515 ನೇ ಜಯಂತಿಯ ರಾಜ್ಯ ಮಟ್ಟದ ಕಾರ್ಯಕ್ರಮವು ಬೆಂಗಳೂರು ನಗರದ ಕಂಠೀರವ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದ್ದು, ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳದಿಂದ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಜ್ಯೋತಿ ಕಳುಹಿಸುವ ಅಂಗವಾಗಿ ಗುರುವಾರದಂದು ನಾಡಪ್ರಭು ಕೆಂಪೇಗೌಡರ ಮೂಲಸ್ಥಳ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮದಲ್ಲಿನ ಚನ್ನಕೇಶವ ದೇವಾಲಯದಿಂದ ಜ್ಯೋತಿ ಹೊರಡಿಸಲು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ರಥಯಾತ್ರೆಗೆ ಚಾಲನೆ ನೀಡಿದರು.

ಇದಕ್ಕೂ ಮುನ್ನ ಕೆಂಪೇಗೌಡರ ಪೂರ್ವಜರಾದ ರಣಭೈರೇಗೌಡರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿ ನಂತರ ಚನ್ನಕೇಶವ ದೇವಸ್ಥಾನದಲ್ಲಿ ಸಚಿವರು ವಿಶೇಷ ಪೂಜೆಯನ್ನು ಸಲ್ಲಿಸಿದರು.

*ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಚಿವರಿಂದ ಕೆಂಪೇಗೌಡರ ಪ್ರತಿಮೆಗೆ ಪುಷ್ಪನಮನ ಸಮರ್ಪಣೆ*

ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ” ಅಂಗವಾಗಿ ಇಂದು ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ “ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಭವ್ಯ ಕಂಚಿನ ಪ್ರಗತಿಯ ಪ್ರತಿಮೆ”ಗೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

*ಜೂನ್ 29 ಕ್ಕೆ ಜಿಲ್ಲಾ ಮಟ್ಟದ ಕೆಂಪೇಗೌಡ ಜಯಂತಿ*

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಜಯಂತಿಯ ಜಿಲ್ಲಾ ಮಟ್ಟದ ಕಾರ್ಯಕ್ರಮವು ಜೂನ್ 29ರ ಶನಿವಾರದಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

 ಕಾರ್ಯಕ್ರಮದಲ್ಲಿ   ಬಯಪ ಅಧ್ಯಕ್ಷ ಶಾಂತಕುಮಾರ್, ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿ.ಬಿ.ಎಂ.ಪಿ)ಯ ಯಲಹಂಕ ವಲಯದ ಆಯುಕ್ತ ಕರೀಗೌಡ, ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ಉಪವಿಭಾಗಾಧಿಕಾರಿ ಶ್ರೀನಿವಾಸ್, ಜಿ.ಪಂ ಉಪಕಾರ್ಯದರ್ಶಿ ರಮೇಶ್ ಟಿ.ಕೆ, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು,  ದೇವನಹಳ್ಳಿ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ  ಕೆ.ಸಿ ವೆಂಕಟೇಗೌಡ, ವಿವಿಧ ಸಂಘಟನೆಗಳ ಮುಖಂಡರು ಸೇರಿ ನೂರಾರು ಸಾರ್ವಜನಿಕರು ಉಪಸ್ಥಿತರಿದ್ದರು.