--Ads--

ಹಿರಿಯ ಪತ್ರಕರ್ತ ಕೃಷ್ಣಪ್ಪ ನಿಧನ

On: July 17, 2024 4:17 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್ 

ಹಿರಿಯ ಪತ್ರಕರ್ತ ಕೃಷ್ಣಪ್ಪ ನಿಧನ

ಬೆಂಗಳೂರು: ಪ್ರಜಾವಾಣಿಯ ಹಿರಿಯ ಪತ್ರಕರ್ತರಾಗಿದ್ದ ಆರ್ ಕೃಷ್ಣಪ್ಪ (75) ಇಂದು ನಿಧನರಾದರು. ಅವರು ಪತ್ನಿ ಒಬ್ಬ ಪುತ್ರನನ್ನು ಅಗಲಿದ್ದಾರೆ. ಪ್ರಜಾವಾಣಿಗೆ ಸೇರಿದ್ದ ಅವರು ಹಿರಿಯ ಉಪ ಸಂಪಾದಕರಾಗಿ ನಿವೃತ್ತರಾಗಿದ್ದರು.

ಪತ್ರಕರ್ತರ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಆರ್ ಕೃಷ್ಣಪ್ಪ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘ, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಕೆಯುಡಬ್ಲ್ಯೂಜೆ ಒಡನಾಡಿಯಾಗಿಯೂ ಇದ್ದರು.
ಪ್ರಸ್ತುತ ಹಿರಿಯ ಪತ್ರಕರ್ತರ ವೇದಿಕೆಯ ಅಧ್ಯಕ್ಷರಾಗಿದ್ದರು.

ಕೆಯುಡಬ್ಲ್ಯೂಜೆ ಸಂತಾಪ:

ಹಿರಿಯ ಪತ್ರಕರ್ತರ ವೇದಿಕೆ ಸಂಘಟನೆಯಲ್ಲಿ ಸಕ್ರೀಯವಾಗಿದ್ದ ಕೃಷ್ಣಪ್ಪ ಅವರ ನಿಧನ ನೋವಿನ ಸಂಗತಿ ಎಂದು ಕೆಯುಡಬ್ಲ್ಯೂಜೆ ಸಂತಾಪ ವ್ಯಕ್ತಪಡಿಸಿದೆ.
ಕೃಷ್ಣಪ್ಪ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಉಪಾಧ್ಯಕ್ಷ, ವಿಜಯ ದರ್ಪಣ ಸಂಪಾದಕ ಮಂಡಿಬೆಲೆ ರಾಜಣ್ಣ ಅವರುಗಳು ಪ್ರಾರ್ಥಿಸಿದ್ದಾರೆ.

WhatsApp

Join Now

Telegram

Join Now

Instagram

Join Now