--Ads--

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

On: July 30, 2024 1:05 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 29 :- 2024-25ನೇ ಸಾಲಿನ ಸಮಗ್ರ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಅನುಷ್ಠಾನ ಗೊಳಿಸಲಾಗುತ್ತಿದ್ದು,

 

ಈ ಯೋಜನೆಯಡಿ ಪ್ರದೇಶ ವಿಸ್ತರಣೆ ಕಾರ್ಯಕ್ರಮ (ದ್ರಾಕ್ಷಿ, ಬಾಳೆ, ದಾಳಿಂಬೆ, ಸೀಬೆ, ಹೈಬ್ರಿಡ್ ತರಕಾರಿ, ಡ್ರ್ಯಾಗನ್ ಪ್ಯೂಟ್ ಮತ್ತು ಹೂ ಬೆಳೆ), ರೋಗ ಮತ್ತು ಕೀಟ ನಿಯಂತ್ರಣ, ಪ್ಲಾಸ್ಟಿಕ್ ಹೊದಿಕೆ, ಹಸಿರುಮನೆ ನಿರ್ಮಾಣ, ವೈಯಕ್ತಿಕ ಕೃಷಿ ಹೊಂಡ, ಪ್ಯಾಕ್ ಹೌಸ್, ಬೀಜ ಸಂಸ್ಕರಣಾ ಘಟಕ ಹಾಗೂ ಅಣಬೆ ಉತ್ಪಾದನಾ ಘಟಕಗಳಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ಫಲಾನುಭವಿಗಳು ಸಹಾಯಧನವನ್ನು ಪಡೆಯಬಹುದಾಗಿರುತ್ತದೆ.

2024-25ನೇ ಸಾಲಿನ ಕಾರ್ಯಕ್ರಮದಡಿ ಘಟಕಗಳನ್ನು ಮಾರ್ಗಸೂಚಿಯನ್ವಯ ನಿರ್ಮಿಸಿಕೊಂಡು ಸಹಾಯಧನ ಪಡೆಯಲು ಇಚ್ಛಿಸುವ/ಆಸಕ್ತಿಯುಳ್ಳ ರೈತರು ಅರ್ಜಿ ಸಮೇತ ಅಗತ್ಯವಾದ ದಾಖಲೆಗಳನ್ನು ಸಂಬಂಧಪಟ್ಟ ತಾಲೂಕುಗಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯಲ್ಲಿ ಸಲ್ಲಿಸಬೇಕು.

ಸರ್ಕಾರ ನಿಗಧಿಪಡಿಸಿದ ಮಾರ್ಗಸೂಚಿ ಹಾಗೂ ಲಭ್ಯವಿರುವ ಅನುದಾನದ ಮೇರೆಗೆ ಜೇಷ್ಠತಾವಾರು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಆದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ಈ ಯೋಜನೆಯ ಸದುಪಯೋಗಪಡಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರುಗಳನ್ನು ಸಂಪರ್ಕಿಸುವುದು.
ಮಲ್ಲಿಕಾರ್ಜುನ ಬಾಬು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ದೇವನಹಳ್ಳಿ – 9480461234,

ಶಶಿಕಲಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ದೊಡ್ಡಬಳ್ಳಾಪುರ- 9482129648,

ರೇಖಾ ಬಿ.ಪಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹೊಸಕೋಟೆ- 8217210320,

ಹರೀಶ್, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ನೆಲಮಂಗಲ- 9880461607

ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp

Join Now

Telegram

Join Now

Instagram

Join Now