--Ads--

 ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್

On: August 3, 2024 2:49 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

 ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್

ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಗಸ್ಟ್ 02 :- ಆಗಸ್ಟ್ 15 ರಂದು ನಡೆಯಲಿರುವ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಯನ್ನು ಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ ಅವರು ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಬೆಳಗ್ಗೆ 07:15 ಗಂಟೆಗೆ ಧ್ವಜಾರೋಹಣ ಹಾಗೂ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಿಸಲಾಗುವುದು. ನಂತರ ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಬೆಳಗ್ಗೆ 9 ಗಂಟೆಯಿಂದ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವದು.

ಜಿಲ್ಲಾಡಳಿತ ಮುಂಭಾಗ ಧ್ವಜ್ ಕಟ್ಟೆ ಸಿದ್ಧಪಡಿಸುವಿಕೆ, ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಗಳ ಮುದ್ರಣ, ಕಾರ್ಯಕ್ರಮದ ವೇದಿಕೆ ನಿರ್ಮಾಣ ವ್ಯವಸ್ಥೆ, ಸಾಂಸ್ಕೃತಿಕ ಕಾರ್ಯಕ್ರಮ, ಪಥಸಂಚಲನ, ಉಪಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯವರು ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್. ಹೆಚ್, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಾಶ್ರೀ.ಎನ್, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now