--Ads--

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ಲಾಸ್ಟಿಕ್ ಧ್ವಜ ಮಾರಾಟ ಹಾಗೂ ಬಳಕೆ ನಿಷೇಧ

On: August 12, 2024 5:17 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ಲಾಸ್ಟಿಕ್ ಧ್ವಜ ಮಾರಾಟ ಹಾಗೂ ಬಳಕೆ ನಿಷೇಧ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್‌. 12, 2024 :- ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ, ಸಂಭ್ರಮದಿಂದ ಆಚರಿಸಲು ಸಿದ್ಧತೆ ಕೈಗೊಳ್ಳಲಾಗಿದ್ದು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ಲಾಸ್ಟಿಕ್ ಧ್ವಜ ಮಾರಾಟ ಹಾಗೂ ಬಳಕೆ ನಿಷೇಧಿಸಲಾಗಿದೆ.

ರಾಜ್ಯಾದ್ಯಂತ ಪ್ಲಾಸ್ಟಿಕ್ ಬಾವುಟ ಸೇರಿದಂತೆ ಕೆಲವು ಪ್ಲಾಸ್ಟಿಕ್ ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿದ್ದು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಭಾರತ ಸರ್ಕಾರವು ಸಹ ಏಕ ಬಳಕೆಯ ಪ್ಲಾಸ್ಟಿಕ್‌ನಿಂದ ತಯಾರಿಸಿದ ಪ್ಲಾಸ್ಟಿಕ್ ಧ್ವಜಗಳ (SUP) ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು 2022 ರ ಜುಲೈ 01 ರಿಂದ ನಿಷೇಧಿಸಿದೆ.

ರಾಷ್ಟ್ರೀಯ ಗೌರವ ಕಾಯ್ದೆ, 1971 ಮತ್ತು ಭಾರತದ ಧ್ವಜ ಸಂಹಿತೆ 2002 ರಡಿ ಎಲ್ಲಾ ಸರ್ಕಾರಿ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಮತ್ತು ಸಾರ್ವಜನಿಕರು ಪ್ರಮುಖ ರಾಷ್ಟ್ರೀಯ, ಸಾಂಸ್ಕೃತಿಕ ಮತ್ತು ಕ್ರೀಡಾಕೂಟಗಳ ಸಂದರ್ಭಗಳಲ್ಲಿ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರೀಯ ಧ್ವಜಗಳನ್ನು ಬಳಸುವಂತಿಲ್ಲ.

ಪ್ಲಾಸ್ಟಿಕ್ ಬಾವುಟಗಳನ್ನು ಬಳಸುವ ಬದಲಿಗೆ ಕಾಗದ ಮತ್ತು ಬಟ್ಟೆಗಳಿಂದ ತಯಾರಿಸಿದ ಬಾವುಟಗಳನ್ನು ಬಳಸಬಹುದಾಗಿದೆ. ಕಾರ್ಯಕ್ರಮಗಳ ಬಳಿಕ ಉಪಯೋಗಿಸಿದ ಧ್ವಜಗಳನ್ನು ಧ್ವಜದ ಘನತೆಗೆ ಅನುಗುಣವಾಗಿ ವಿಲೇವಾರಿ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

WhatsApp

Join Now

Telegram

Join Now

Instagram

Join Now