--Ads--

ಉದ್ಯೋಗ ಮೇಳಕ್ಕೆ ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಿ: ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್

On: August 19, 2024 1:40 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಸೆಪ್ಟೆಂಬರ್ 13 ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ

ಉದ್ಯೋಗ ಮೇಳಕ್ಕೆ ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಿ: ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್

ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಗರ (ಬಿಜಿಎಸ್ ನಗರ) ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 19, 2024 :- ಸೆಪ್ಟೆಂಬರ್ 13 ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ದೇವನಹಳ್ಳಿ ಟೌನ್ ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದು, ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಲು ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್ ಅವರು ಹೇಳಿದರು.


ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮ’ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸೆಪ್ಟೆಂಬರ್ 13 ರಂದು ನಡೆಯಲಿರುವ ಬೃಹತ್ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಕಂಪನಿಗಳು ಭಾಗಿಯಾಗಲಿದ್ದು, ಹಲವು ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆನ್ಲೈನ್ ಪೋರ್ಟಲ್ https://bangalorerural.nic.in/en/job-fair/ ನಲ್ಲಿ ಸ್ವ-ವಿವರದೊಂದಿಗೆ ನೊಂದಾಯಿಸಬಹುದಾಗಿದೆ.
ಉದ್ಯೋಗಾವಕಾಶ ಪಡೆದುಕೊಳ್ಳಲು ಉತ್ತಮ ವೇದಿಕೆಯಾಗಿದ್ದು, ಉದ್ಯೋಗ ಮೇಳಕ್ಕೆ ಅಭ್ಯರ್ಥಿಗಳು ನೋಂದಾಯಿಸಲು ಜಿಲ್ಲೆಯ ಎಲ್ಲಾ ಕಾಲೇಜುಗಳಿಗೆ ಮಾಹಿತಿ ನೀಡಿ, ಉದ್ಯೋಗ ಹುಡುಕುತ್ತಿರುವ ನಿರುದ್ಯೋಗ ಯುವಕ ಯುವತಿಯರಿಗೆ ಹೆಚ್ಚಿನ ಪ್ರಚಾರ ನೀಡಿ ನೋಂದಾಯಿಸಿಕೊಳ್ಳುವಂತೆ ಕ್ರಮ ವಹಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ.ಕೆ ರಮೇಶ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಕೌಶಲ್ಯಾಭಿವೃದ್ಧಿ ಅಧಿಕಾರಿ ಜಗನ್ನಾಥ, ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ನರೇಂದ್ರ ಬಾಬು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now