--Ads--

ಜಾಲಿಗೆ ಗ್ರಾಮ ಪಂಚಾಯತಿಗೆ ಪಂಚಾಯತ್ ರಾಜ್ ಆಯುಕ್ತರು ಭೇಟಿ: ವಿವಿಧ ಘಟಕಗಳ ಪ್ರಗತಿ ವಿಕ್ಷಣೆ

On: August 22, 2024 5:46 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಜಾಲಿಗೆ ಗ್ರಾಮ ಪಂಚಾಯತಿಗೆ ಪಂಚಾಯತ್ ರಾಜ್ ಆಯುಕ್ತರು ಭೇಟಿ: ವಿವಿಧ ಘಟಕಗಳ ಪ್ರಗತಿ ವಿಕ್ಷಣೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 22, 2024 :- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಜಾಲಿಗೆ ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ಪಂಚಾಯತ್ ರಾಜ್ ಆಯುಕ್ತರಾದ ಅರುಂಧತಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು 16 ನೇ ಹಣಕಾಸು ಆಯೋಗದ ತಂಡದೊಂದಿಗೆ ಭೇಟಿ ನೀಡಿದರು.


ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಗ್ರಂಥಾಲಯ, ಶಿಶುಪಾಲನ ಕೇಂದ್ರ, ಅಂಗನವಾಡಿ ಕೇಂದ್ರಗಳು, ಎಸ್.ಡಬ್ಯ್ಲೂ.ಎಮ್ ಘಟಕಗಳಿಗೆ ತೆರಳಿ ಪರಿಶೀಲನೆ ಮಾಡಿದರು.

ಈ ಸಂದರ್ಭದಲ್ಲಿ ಜಿ.ಪಂ ಉಪಕಾರ್ಯದರ್ಶಿಗಳಾದ ಟಿ.ಕೆ ರಮೇಶ್, ತಾ. ಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥಗೌಡ, ವಲಯ ಅರಣ್ಯ ಅಧಿಕಾರಿ ಗೀತಾ, ಗ್ರಾ.ಪಂ ಅಧ್ಯಕ್ಷ ಆನಂದಕುಮಾರ್, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪ್ರಕಾಶ ಹೆಚ್ ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮೊಬೈಲ್ ರಿಪೇರಿ & ಸೇವೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 22,2024:-ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್ ರಿಪೇರಿ & ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಸೆಪ್ಟೆಂಬರ್ 11 ರಿಂದ ಪ್ರಾರಂಭವಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 9380162042 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp

Join Now

Telegram

Join Now

Instagram

Join Now