--Ads--

ಬೆಂ.ಗ್ರಾ.ಜಿಲ್ಲೆಯಲ್ಲಿ ಎಲ್ಲಿಯಾದರು ನೋಂದಣಿ ವ್ಯವಸ್ಥೆ ಜಾರಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

On: August 30, 2024 12:11 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ಬೆಂ.ಗ್ರಾ.ಜಿಲ್ಲೆಯಲ್ಲಿ ಎಲ್ಲಿಯಾದರು ನೋಂದಣಿ ವ್ಯವಸ್ಥೆ ಜಾರಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 30 :- ಸ್ಥಿರಾಸ್ತಿ ನೋಂದಣಿ ಪ್ರಕ್ರಿಯೆಯನ್ನು ಸರಳೀಕೃತಗೊಳಿಸುವ ಭಾಗವಾಗಿ ಬೆoಗಳೂರು ಗ್ರಾಮಾoತರ ಜಿಲ್ಲೆಯ ಯಾವುದೇ ಕಚೇರಿಯಲ್ಲಿ ಸ್ಥಿರಾಸ್ತಿ ನೋಂದಣಿಗೆ ಅವಕಾಶ ಮಾಡಿಕೊಡಲಾಗಿದೆ ಎoದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ತಿಳಿಸಿದ್ದಾರೆ.

2011ರಲ್ಲಿ ಬೆಂಗಳೂರು ನಗರ ಜಿಲ್ಲೆ ಮತ್ತು 2024 ರಲ್ಲಿ ಮಾರ್ಚ್‌ನಲ್ಲಿ ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿತ್ತು.
ಇದು ಆ ಜಿಲ್ಲೆಯಲ್ಲಿ ಯಶಸ್ವಿಯಾಗುತ್ತಿರುವ ಕಾರಣ ರಾಜ್ಯಾದ್ಯಂತ ಇದನ್ನು ವಿಸ್ತರಿಸಲಾಗಿದೆ. ಅದರಂತೆ ಜಿಲ್ಲೆಯ ಉಪನೋಂದಣಿ ಕಚೇರಿಯಲ್ಲೂ ನೋಂದಣಿಗ ಅವಕಾಶ ಕಲ್ಪಿಸಲಾಗಿದೆ. ಎಲ್ಲಿಯಾದರು (Any Where) ನೋಂದಣಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪನೋಂದಣಿ ಕಛೇರಿಗಳಿಗೂ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪನೋಂದಣಿ ಕಛೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದ್ದು, ಆದರೆ ಎಲ್ಲಿಯಾದರು ನೋಂದಣಿಯಲ್ಲಿ ದಸ್ತಾವೇಜಿನ ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರು ಉಪನೋಂದಣಿ ಕಛೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.

ಈ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು, ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ನೋಂದಣಿಯಲ್ಲಿ ವಿಳಂಬವನ್ನು ತಡೆಗಟ್ಟುತ್ತದೆ. ಸಾರ್ವಜನಿಕರು ಸಮೀಪಲ್ಲಿರುವ ಉಪನೋಂದಣಿ ಕಛೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು.

ಸ್ಲಾಟ್ ಲಭ್ಯವಿರುವಂತಹ ಕಛೇರಿಯನ್ನು ನೋಂದಣಿಗೆ ಆಯ್ಕೆ ಮಾಡಿಕೊಳ್ಳಬಹುದು. ನೋಂದಣಿ ಪ್ರಕ್ರಿಯೆ ಸುಲಭವಾಗುವುದಲ್ಲದೆ ಸಮಯವು ಸಹ ಉಳಿಯುತ್ತದೆ.
ಇದರಿoದ ಉಪನೋಂದಣಿ ಕಛೇರಿಯಲ್ಲಿ ಜನದಟ್ಟಣೆ ಕಡಿಮೆಯಾಗುತ್ತದೆ. ಕಛೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆಯಾಗುತ್ತದೆ ಹಾಗೂ ಕಛೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುತ್ತದೆ.

ಆದುದರಿಂದ ಸಾರ್ವಜನಿಕರು ಎಲ್ಲಿಯಾದರು (Any Where) ನೋಂದಣಿಯ ಸೌಲಭ್ಯದ ಸದುಪಯೋಗ ಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಪಾಟ್ ಲಭ್ಯವಿರುವಂತಹ ಕಛೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳ ಬಹುದಾಗಿದೆ. ಉದಾಹರಣೆಗೆ ನೆಲಮಂಗಲ ಉಪನೋಂದಣಿ ಕಛೇರಿ, ವ್ಯಾಪ್ತಿಗೆ ಬರುವ ಸ್ವತ್ತುಗಳನ್ನು ಹೊಸಕೋಟೆ, ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ಯಾವುದಾದರು ಒಂದು ಉಪನೋಂದಣಿ ಕಛೇರಿಯಲ್ಲಿ ಆಯ್ಕೆ ಮಾಡಿಕೊಂಡು ನೋಂದಣಿ ಪ್ರಕ್ರಿಯೆಯನ್ನು ಮಾಡಿಕೊಳ್ಳಬಹುದಾಗಿರುತ್ತದೆ.

 

ಈ ಸೌಲಭ್ಯವು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಪಟ್ಟ ತಾಲ್ಲೂಕುಗಳಾದ ದೇವನಹಳ್ಳಿ, ಹೊಸಕೋಟೆ, ನೆಲಮಂಗಲ ಮತ್ತು ದೊಡ್ಡಬಳ್ಳಾಪುರ, ಉಪನೋಂದಣಾಧಿಕಾರಿಗಳ ಕಛೇರಿ ವ್ಯಾಪ್ತಿಗೆ ಒಳಪಡುವ ಆಸ್ತಿಗಳನ್ನು ಜಿಲ್ಲೆಯ ಯಾವುದೇ ಉಪನೋಂದಣಿ ಕಛೇರಿಯಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿರುತ್ತದೆ
ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

WhatsApp

Join Now

Telegram

Join Now

Instagram

Join Now