--Ads--

ಜಿಲ್ಲಾ ತಂಬಾಕು ನಿಯಂತ್ರಣ ಘಟಕ ದಾಳಿ:1500 ರೂ.ಗಳ ದಂಡ ಸಂಗ್ರಹ

On: September 10, 2024 10:10 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಜಿಲ್ಲಾ ತಂಬಾಕು ನಿಯಂತ್ರಣ ಘಟಕ ದಾಳಿ:1500 ರೂ.ಗಳ ದಂಡ ಸಂಗ್ರಹ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೆಪ್ಟೆಂಬರ್ 10 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡತುಮಕೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಗೆ ಬರುವ ಬಾಶೆಟ್ಟಿಹಳ್ಳಿಯಲ್ಲಿ ಕೋಟ್ಪಾ-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವ ನಿಟ್ಟಿನಲ್ಲಿ ವಿವಿಧ ಅಂಗಡಿಗಳ ಮೇಲೆ ಕೋಟ್ಪಾ ದಾಳಿಯನ್ನು ನಡೆಸಿದ್ದು, ಸೆಕ್ಷನ್ 4 ರ ಅಡಿಯಲ್ಲಿ 10 ಪ್ರಕರಣಗಳನ್ನು ದಾಖಲಿಸಿ 1500 ರೂಗಳ ದಂಡವನ್ನು ಸಂಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ದೊಡ್ಡತುಮಕೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಂಜುವಾಣಿ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಶರಣಮ್ಮ ಅಡಿಹಾಳ್ ಹಾಗೂ ಕೀರ್ತಿ, ಸಮಾಜ ಸೇವಕ ವೆಂಕಟೇಶ್ ಉಪಸ್ಥಿತರಿದ್ದರು.

 

ಹೈನುಗಾರಿಕೆ & ಎರೆಹುಳುಗೊಬ್ಬರ ತಯಾರಿಕೆ ಉಚಿತ ತರಬೇತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೆಪ್ಟೆಂಬರ್ 10: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಹಸು ಸಾಕಾಣಿಕೆ(ಹೈನುಗಾರಿಕೆ) & ಎರೆಹುಳುಗೊಬ್ಬರ ಕುರಿತ 10 ದಿನಗಳ ಉಚಿತ ತರಬೇತಿಯು ಸೆಪ್ಟೆಂಬರ್ 24 ರಿಂದ ಆಯೋಜಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 18 ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp

Join Now

Telegram

Join Now

Instagram

Join Now