--Ads--

ಶಾಲಾ ಮಕ್ಕಳಿಗೆ ವಾರದ 6 ದಿನವೂ ಮೊಟ್ಟೆ ವಿತರಣೆ: ಜಿ.ಪಂ ಸಿಇಒ ಡಾ. ಕೆ.ಎನ್ ಅನುರಾಧ

On: September 25, 2024 1:09 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಶಾಲಾ ಮಕ್ಕಳಿಗೆ ಬಿಸಿಯೂಟ ಜತೆಗೆ ವಾರದ 6 ದಿನವೂ ಮೊಟ್ಟೆ ವಿತರಣೆ: ಜಿ.ಪಂ ಸಿಇಒ ಡಾ. ಕೆ.ಎನ್ ಅನುರಾಧ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 25, 2024 :- ಸರ್ಕಾರ ಶಾಲಾ ಮಕ್ಕಳಿಗೆ ಉಚಿತ ಗುಣಮಟ್ಟದ ಶಿಕ್ಷಣದ ಜತೆಗೆ ಮಧ್ಯಾಹ್ನದ ಪೌಷ್ಟಿಕ ಬಿಸಿಯೂಟದೊಂದಿಗೆ ವಾರದ 6 ದಿನವೂ ಮೊಟ್ಟೆ ವಿತರಣೆ ಮಾಡುತ್ತಿದೆ. ಈ ಕಾರ್ಯಕ್ರಮ ಮಕ್ಕಳಲ್ಲಿನ ಅಪೌಷ್ಟಿಕತೆಯ ಕೊರತೆಯನ್ನು ನಿವಾರಿಸಲು ಸಹಕಾರಿಯಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ಹೇಳಿದರು.


ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ಬೆಟ್ಟಕೋಟೆ ಗ್ರಾಮ ಪಂಚಾಯಿತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ 2024-25ನೇ ಸಾಲಿನ ಮದ್ಯಾಹ್ನದ ಉಪಹಾರ ಯೋಜನೆಯಡಿ ಆಜೀಂ ಪ್ರೇಮ್ ಜೀ ಪೌಂಡೇಶನ್ ನ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ, ಮಾತನಾಡಿದ ಅವರು ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುವ 02 ದಿನಗಳ ಜತೆಗೆ ಹೆಚ್ಚುವರಿ 04 ದಿನಗಳು ಸೇರಿ ವಾರದ 06 ದಿನವೂ ಪೌಷ್ಟಿಕ ಆಹಾರದ ಜತೆಗೆ ಮೊಟ್ಟೆ ವಿತರಿಸಲಾಗುವುದು. ಜಿಲ್ಲೆಯಾದ್ಯಂತ 64,934 ಮಕ್ಕಳು ಪ್ರಯೋಜನ ಪಡೆಯುತ್ತಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಬಿ. ರಾಜಣ್ಣ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಅನಂತಕುಮಾರಿ ಚಿನ್ನಪ್ಪ, ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೃಷ್ಣಮೂರ್ತಿ, ದೇವನಹಳ್ಳಿ ತಾಲ್ಲೂಕು ತಹಸೀಲ್ದಾರ್ ಬಾಲಕೃಷ್ಣ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥಗೌಡ, ದೇವನಹಳ್ಳಿ ಕ್ಷೇತ್ರಶಿಕ್ಷಣಾಧಿಕಾರಿ ಸುಮಾ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಸುಧಾ, ಏರ್ ಪೋರ್ಟ್ ಆತೋರಿಟಿ ಶಿವಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ವಿ ಭೀಮೇಶ್, ಉಪಾಧ್ಯಕ್ಷೆ ಅರ್ಚನಾ, ಎಸ್.ಡಿ.ಎಂ.ಸಿ ಅಧ್ಯಕ್ಷ ರವಿ ಹಾಗೂ ಸದಸ್ಯರು ಸೇರಿ ಶಾಲಾ ಶಿಕ್ಷಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now