--Ads--

ಮಹಿಳೆಯರ ಸ್ವಾವಲಂಬಿ ಬದುಕಿಗೆ ಅಕ್ಕ ಬೇಕರಿ/ಕೆಫೆ ಸಹಕಾರಿ: ಸಚಿವ ಶರಣ ಪ್ರಕಾಶ ಪಾಟೀಲ್

On: October 9, 2024 5:58 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ದೇವನಹಳ್ಳಿಯಲ್ಲಿ ಅಕ್ಕ ಬೇಕರಿ/ಕೆಫೆಗೆ ಚಾಲನೆ

ಮಹಿಳೆಯರ ಸ್ವಾವಲಂಬಿ ಬದುಕಿಗೆ ಅಕ್ಕ ಬೇಕರಿ/ಕೆಫೆ ಸಹಕಾರಿ: ಸಚಿವ ಶರಣ ಪ್ರಕಾಶ ಪಾಟೀಲ್

ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 08,2024 :- ಮಹಿಳಾ ಸಬಲೀಕರಣವನ್ನು ಉತ್ತೇಜಿಸಲು ಹಾಗೂ ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡಲು ʼಅಕ್ಕ ಕೆಫೆʼ ಸಹಕಾರಿಯಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಚಿವ ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ವತಿಯಿಂದ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ನಿರ್ಮಿತಗೊಂಡಿರುವ ಅಕ್ಕ – ಬೇಕರಿ/ ಕೆಫೆ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳಾ ಸಬಲೀಕರಣವನ್ನು ಉತ್ತೇಜಿಸಲು ಹಾಗೂ ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಉಪಕ್ರಮದ ಅಡಿಯಲ್ಲಿ ʼಅಕ್ಕ ಕೆಫೆʼಯನ್ನು ಪ್ರಾರಂಭಿಸಲಾಯಿತು.

ಮಹಿಳಾ ಸಬಲೀಕರಣದತ್ತ ಮಹತ್ವದ ಹೆಜ್ಜೆಯನ್ನಿಟ್ಟು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್(NRLM), ಕರ್ನಾಟಕ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿಯಲ್ಲಿ ಮೊದಲ ಅಕ್ಕ ಕೆಫೆಯನ್ನು ಬೆಂಗಳೂರಿನಲ್ಲಿ ಪ್ರಾರಂಭಿಸಲಾಗಿದ್ದು, ದೇವನಹಳ್ಳಿಯಲ್ಲಿ 2 ನೇ ಅಕ್ಕ ಕೆಫೆ/ ಬೇಕರಿ ಪ್ರಾರಂಭಿಸಲಾಗಿದೆ. ರಾಜ್ಯಾದ್ಯಂತ 50 ಅಕ್ಕ ಕೆಫೆ ತೆರೆಯಲಾಗುವುದು ಎಂದರು. ಹಾಗೇಯೇ ಮಹಿಳೆಯರ ಸಬಲೀಕರಣಕ್ಕೆ ರಾಜ್ಯಾದ್ಯಂತ 2500ಕಾಫಿ ಕೆಫೆ ಸ್ಥಾಪನೆ ಮಾಡುವ ಉದ್ದೇಶವಿದೆ. 3500 ಮಹಿಳೆಯರು ತರಬೇತಿ ಪಡೆದುಕೊಂಡು ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಕೆಲಸ ಮಾಡುತ್ತಿದ್ದಾರೆ. ಮಹಿಳೆಯರ ಸಬಲೀಕರಣ ದೃಷ್ಟಿಯಿಂದ ಗ್ಯಾರಂಟಿ ಯೋಜನೆಗಳ ಜೊತೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು ಜಾರಿಗೆ ತಂದಿದ್ದೇವೆ ಎಂದರು.

ಸ್ವಸಹಾಯ ಗುಂಪಿಗೆ ಸೇರಿದ 12 ಮಹಿಳೆಯರ ತಂಡವು ಈ ಕೆಫೆಯನ್ನು ನಡೆಸುತ್ತದೆ. ಅಕ್ಕ ಕೆಫೆ ಬೆಳಗ್ಗೆ 09 ರಿಂದ ರಾತ್ರಿ 09 ರ ವರೆಗೆ ವಾರವಿಡಿ ಕಾರ್ಯನಿರ್ಹಿಸಲಿದೆ. ಮತ್ತು ಇಲ್ಲಿ ಆರೋಗ್ಯಕರ, ಸ್ವಾದಿಷ್ಟಕರವಾದ ಆಹಾರ ಲಭ್ಯವಿದ್ದು, ಶುಚಿ-ರುಚಿಯ ಜೊತೆಗೆ ಕೈಗೆಟಕುವ ದರದಲ್ಲಿ ಗ್ರಾಹಕರಿಗೆ ಆಹಾರವನ್ನು ಪೂರೈಸಲಾಗುತ್ತದೆ. ಸರ್ಕಾರ ಬಜೆಟ್ನಲ್ಲಿ ಘೋಷಣೆ ಮಾಡಿದಂತೆ ಅಕ್ಕ ಕೆಫೆಯು ಕಾರ್ಯರೂಪಕ್ಕೆ ಬಂದಿದೆ.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸ್ವಸಹಾಯ ಗುಂಪುಗಳ ಮೂಲಕ ಮಹಿಳೆಯರನ್ನು ಬಲಗೊಳಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಮಹಿಳೆಯರು ಸದುಪಯೋಗ ಪಡಿಸಿಕೊಂಡು ಜೀವನ ರೂಪಿಸಿಕೊಳ್ಳಬೇಕು. ಅಕ್ಕ ಕೆಫೆಯು ಒಂದು ಉತ್ತಮ ವೇದಿಕೆಯಾಗಿದ್ದು ಮಹಿಳೆಯರ ಸ್ವಾವಲಂಬಿ ಬದುಕಿಗೆ ಸಹಕಾರಿಯಾಗಲಿದೆ ಎಂದರು.

ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪನೆಗೆ ಮನವಿ

ಜಿಲ್ಲೆಯಲ್ಲಿ ನಿರುದ್ಯೋಗಿಗಳಿಗೆ ಕೌಶಲ್ಯ ಆಧಾರಿತ ತರಬೇತಿ ಅವಶ್ಯಕತೆ ಇದ್ದು ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪಿಸಬೇಕು ಎಂದು ಸಚಿವ ಮುನಿಯಪ್ಪ ಅವರು ಮನವಿ ಮಾಡಿದರು. ಇದಕ್ಕೆ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿ ಐಟಿಐ, ಜಿಟಿಟಿಸಿ ಕೇಂದ್ರಗಳನ್ನು ಮೇಲ್ದರ್ಜೆ ಏರಿಸಿ, ಮುಂದಿನ ದಿನಗಳಲ್ಲಿ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರ ಅಧ್ಯಕ್ಷ ಶಾಂತಕುಮಾರ್, ಕೌಶಲ್ಯಾಭಿವೃದ್ಧಿ ಇಲಾಖೆಯ ಅಭಿವೃದ್ಧಿ ಆಯುಕ್ತ ಉಮಾ ಮಹದೇವನ್, ರಾಷ್ಟ್ರೀಯ ಜೀವನೋಪಾಯ ಅಭಿಯಾನ ನಿರ್ದೇಶಕಿ ಪಿ.ಶ್ರೀವಿದ್ಯಾ, ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್, ಜಿ.ಪಂ ಸಿ.ಇ.ಒ ಅನುರಾಧ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಅಧಿಕಾರಿಗಳು ಸ್ವಸಹಾಯ ಗುಂಪುಗಳ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.

ನೇಕಾರ ಸಮ್ಮಾನ್ ಯೋಜನೆಯಡಿ ಆರ್ಥಿಕ ನೆರವಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್. 08, 2024:- ಬೆಂಗಳೂರು ಗ್ರಾಮಾಂತರ ಜಿಲ್ಲೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2024-25ನೇ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯನ್ನು ರಾಜ್ಯದಲ್ಲಿರುವ ಪ್ರತಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕ ರೂ.5000/- ಗಳ ಆರ್ಥಿಕ ನೆರವನ್ನು ನೀಡುವ ಸಲುವಾಗಿ ಸೇವಾ ಸಿಂಧು ಪೋರ್ಟಲ್ ನಲ್ಲಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರ ಮಾಹಿತಿಯನ್ನು ಆಪ್ ಲೋಡ್ ಮಾಡಲು ಅನುಕೂಲವಾಗುವಂತೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಜಿಲ್ಲೆಯ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವಘಟಕಗಳ ಮಾಲಿಕರು/ ನೇಕಾರರು/ಕಾರ್ಮಿಕರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೇಶಕರ ಕಛೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ, ಈ ಕಛೇರಿಯಿಂದ ಅರ್ಜಿಯನ್ನು ಪಡೆದು ದಾಖಲಾತಿಗಳೊಂದಿಗೆ ಅಕ್ಟೊಬರ್ 30 ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp

Join Now

Telegram

Join Now

Instagram

Join Now