ವಿಜಯ ದರ್ಪಣ ನ್ಯೂಸ್…
ಜಿಲ್ಲಾ ವಿಪತ್ತು ನಿರ್ವಹಣೆ ಕೇಂದ್ರ ಹಾಗೂ ಉಸ್ತುವಾರಿ ಘಟಕ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್. 10, 2024 :- ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ವಿಪತ್ತು ನಿರ್ವಹಣೆ ಕೇಂದ್ರ(ಕೊಠಡಿ ಸಂಖ್ಯೆ. 117A) ಮತ್ತು ಉಸ್ತುವಾರಿ ಘಟಕ(ಕೊಠಡಿ ಸಂಖ್ಯೆ. 117B)ದ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ನೆರವೇರಿಸಿದರು.
ಈ ವೇಳೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧ, ಅಪರ ಜಿಲ್ಲಾಧಿಕಾರಿ ಆರ್. ಸುಮಾ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಯೋಜನಾ ನಿರ್ದೇಶಕ ವಿಠಲ್ ಕಾವ್ಳೆ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ : ಜಿಲ್ಲಾಡಳಿತ ಭವನದಲ್ಲಿ ಆಯುಧ ಪೂಜೆ ಹಾಗೂ ವಿಜಯದಶಮಿ ಆಚರಣೆ.

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್. 10, 2024 :- ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದದಲ್ಲಿ ಕಂದಾಯ ಇಲಾಖೆ ವತಿಯಿಂದ ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ, ಅಪರ ಜಿಲ್ಲಾಧಿಕಾರಿ ಆರ್.ಸುಮಾ, ಜಿಲ್ಲಾಧಿಕಾರಿ ಕಛೇರಿ ಸಹಾಯಕ ರಾಜೀವ್ ಸುಲೋಚನ, ಆರ್.ಹೆಚ್.ಒ ಗಂಗಾಧರ್, ಜೆ.ಹೆಚ್.ಎಮ್ ಇಂದ್ರಮ್ಮ ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ: ಜಿಲ್ಲಾ ಪಂಚಾಯತ್ ನಲ್ಲಿ ಆಯುಧ ಪೂಜೆ ಹಾಗೂ ವಿಜಯದಶಮಿ ಆಚರಣೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್. 10, 2024 :- ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಡಾ. ಕೆ.ಎನ್. ಅನುರಾಧ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಯೋಜನಾ ನಿರ್ದೇಶಕ ವಿಠಲ್ ಕಾವ್ಳೆ, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.