--Ads--

ಶಬ್ದ, ಮಾಲಿನ್ಯ ಉಂಟು ಮಾಡುವ ಪಟಾಕಿಗಳ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ

On: October 30, 2024 2:11 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ರಾತ್ರಿ 08 ರಿಂದ 10 ರವರೆಗೆ ಪಟಾಕಿ ಹಚ್ಚಲು ಅವಕಾಶ

ಶಬ್ದ, ಮಾಲಿನ್ಯ ಉಂಟು ಮಾಡುವ ಪಟಾಕಿಗಳ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 30 :-ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ಉದ್ದೇಶದಿಂದ ಹೆಚ್ಚು ಶಬ್ದ ಮಾಡುವ, ಮಾಲಿನ್ಯ ಉಂಟುಮಾಡುವ ಪಟಾಕಿಗಳ ಮಾರಾಟ ಮತ್ತು ಉಪಯೋಗಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ತಿಳಿಸಿದ್ದಾರೆ.

ಸಾರ್ವಜನಿಕರು ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಉಪಯೋಗಿಸಬಾರದೆಂದು ತಿಳಿಸಲಾಗಿದೆ. ಸರ್ವೋಚ್ಛ ನ್ಯಾಯಾಲಯದ ‌ನಿರ್ದೇಶನದಂತೆ ದೀಪಾವಳಿ ಹಬ್ಬದ ದಿನದಂದು ರಾತ್ರಿ 8.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಹಚ್ಚಲು ಅವಕಾಶವಿದೆ. ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ.

ಬೆಳಗಿನ ಸಮಯದಲ್ಲಿ ನಿಶ್ಯಬ್ಧ ವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳ (ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರ ಇತ್ಯಾದಿಗಳು) ಸುತ್ತಮುತ್ತಲ್ಲಿನ ಪ್ರದೇಶದಲ್ಲಿ ಯಾವುದೇ ರೀತಿಯ ಶಬ್ಧ ಉಂಟು ಮಾಡುವ ನಿಷೇಧಿತ ಪಟಾಕಿಗಳನ್ನು ಬಳಸಬಾರದು. ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸಬೇಕು.

ನಗರ ಮತ್ತು ಪಟ್ಟಣದ ಚಿಕ್ಕ ಚಿಕ್ಕ ಬೀದಿಗಳಲ್ಲಿ ಪಟಾಕಿಗಳನ್ನು, ಬಾಣ ಬಿರುಸುಗಳನ್ನು ಉಪಯೋಗಿಸುವದರಿಂದ ಅಲ್ಲಿನ ನಿವಾಸಿಗಳಿಗೆ ಹಾನಿಯುಂಟಾಗುವ ಅಥವಾ ಬೆಂಕಿ ಹಾಗೂ ಸ್ಪೋಟದಿಂದ ಅಪಾಯಗಳು ಆಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಪಟಾಕಿಗಳನ್ನು ವಸತಿ ಪ್ರದೇಶಗಳಲ್ಲಿ ಉಪಯೋಗಿಸುವ ಬದಲು ಮೈದಾನಗಳಲ್ಲಿ ಒಟ್ಟಾಗಿ ಸೇರಿ ಆಚರಿಸಲು ತಿಳಿಸಲಾಗಿದೆ.

ದೀಪಾವಳಿ ಹಬ್ಬವನ್ನು ಪಟಾಕಿಗಳನ್ನು ಉಪಯೋಗಿಸದೆ ದೀಪದ ಹಬ್ಬವನ್ನಾಗಿ ಆಚರಿಸಬಹುದಾಗಿದೆ. ಹಬ್ಬದ ಸಮಯದಲ್ಲಿ ಹಸಿರು ಪಟಾಕಿಗಳನ್ನು ಬಳಸಿ ಪರಿಸರ ಸ್ನೇಹಿಯಾಗಿ ಹಬ್ಬವನ್ನು ಆಚರಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp

Join Now

Telegram

Join Now

Instagram

Join Now