--Ads--

69ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ: ಜಿಲ್ಲಾಧಿಕಾರಿಯವರಿಂದ ಧ್ವಜಾರೋಹಣ

On: November 1, 2024 2:50 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

69ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ: ಜಿಲ್ಲಾಧಿಕಾರಿಯವರಿಂದ ಧ್ವಜಾರೋಹಣ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 01 : “69 ನೇ ಕನ್ನಡ ರಾಜ್ಯೋತ್ಸವ”ದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದ ಆವರಣದಲ್ಲಿಂದು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಕನ್ನಡಾಂಬೆ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ, ತ್ರಿವರ್ಣ ಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಅಭಿವೃದ್ಧಿ ಯೋಜನೆ ಪ್ರಾಧಿಕಾರದ ಅಧ್ಯಕ್ಷರಾದ ವಿ.ಶಾಂತಕುಮಾರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎನ್.ಕೃಷ್ಣಪ್ಪ,
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ‌.ಕೆ.ಎನ್.ಅನುರಾಧ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

£££££££££££££££££££££££££££££££££

ಜಿಲ್ಲಾಡಳಿತ ಭವನ ಆವರಣದಲ್ಲಿ ಹಲ್ಮಿಡಿ ಶಾಸನ ಅನಾವರಣ.

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಜಿಲ್ಲಾಡಳಿತ ಭವನದ ಆವರಣದಲ್ಲಿ ಕನ್ನಡದ ಮೊಟ್ಟಮೊದಲ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರರಾದ ಕೆ.ಹೆಚ್ ಮುನಿಯಪ್ಪ ಅವರು ಉದ್ಘಾಟಿಸಿ‌, ಪುಷ್ಪಾರ್ಚನೆ ನೆರವೇರಿಸಿದರು.

“ಕರ್ನಾಟಕ ಸಂಭ್ರಮ-50’ರ ಹಿನ್ನೆಲೆಯಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಸ್ಥಾಪಿಸುವ ಮೂಲಕ ಈ ಸವಿನೆನಪನ್ನು ಶಾಶ್ವತವಾಗಿಡುವುದು ಯೋಜನೆಯ ಉದ್ದೇಶ

ಕನ್ನಡದ ಮೊದಲ ಶಿಲಾ ಶಾಸನ

ಬೇಲೂರು ತಾಲೂಕಿನ ಹಲ್ಮಿಡಿಯಲ್ಲಿ 1936ರಲ್ಲಿ ಪತ್ತೆಯಾದ ಶಾಸನವನ್ನು ಕನ್ನಡ ಲಿಪಿಯಲ್ಲಿ ಲಭ್ಯವಾದ ಮೊಟ್ಟ ಮೊದಲ ಶಾಸನವೆಂದು ಪರಿಗಣಿಸಲಾಗಿದೆ. 16 ಸಾಲುಗಳ ಬರಹ ಇದರಲ್ಲಿತ್ತು. ಇದು ಕ್ರಿ.ಶಕ 450ರ ಸುಮಾರಿನದ್ದು ಎಂದು ಅಂದಾಜಿಸಲಾಗಿದೆ. ಇದರ ಬಗ್ಗೆ ಸಾಕಷ್ಟು ಅಧ್ಯಯನ-ಅವಲೋಕನಗಳು ನಡೆದಿದೆ. ಹೀಗಾಗಿ ಈ ಶಿಲಾ ಶಾಸನದ ಮಹತ್ವವನ್ನು ಶಾಶ್ವತವಾಗಿ ಜನರ ನೆನಪಿನಲ್ಲಿ ಉಳಿಯುವಂತೆ ಮಾಡುವ ನಿಟ್ಟಿನಲ್ಲಿ ಎಲ್ಲ ಜಿಲ್ಲಾ ಕೇಂದ್ರದಲ್ಲಿ ಪ್ರತಿಕೃತಿ ಸ್ವರೂಪದಲ್ಲಿ ಇರಿಸಲಾಗಿದೆ.

ಹಲ್ಮಿಡಿ ಶಾಸನದ ಪ್ರತಿಕೃತಿ.
ಎತ್ತರ: ನಾಲ್ಕೂವರೆ ಅಡಿ
ಅಗಲ: 2 ಅಡಿ
ದಪ್ಪ: 6 ಇಂಚು
ತೂಕ: 450 ರಿಂದ 500 ಕಿಲೋ

WhatsApp

Join Now

Telegram

Join Now

Instagram

Join Now