--Ads--

ಹಿರಿಯ ಪತ್ರಕರ್ತ ವೀರಪ್ಪ ಎಂ.ಬಾವಿ ನಿಧನ.

On: November 3, 2024 3:59 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಹಿರಿಯ ಪತ್ರಕರ್ತ ವೀರಪ್ಪ ಎಂ.ಬಾವಿ ನಿಧನ.

ದಾವಣಗೆರೆ ದೇವರಾಜ್ ಅರಸು ಬಡಾವಣೆ ನಿವಾಸಿ ಹಾಗೂ ಇಂದಿನ ಸುದ್ದಿ ಪತ್ರಿಕೆ ಸಂಪಾದಕ ವೀರಪ್ಪ ಎಂ.ಭಾವಿ (63) ಅವರು 03-11-2024 ರಂದು ಭಾನುವಾರ ಬೆಳಗಿನ ಜಾವ 2:50ಕ್ಕೆ ನಿಧನರಾದರು.

ಅವರಿಗೆ ಪತ್ನಿ, ಇಬ್ಬರು ಪುತ್ರರು ಪುತ್ರಿ ಸೇರಿದಂತೆ ಅಪಾರ ಬಂದು ಬಳಗ ಇದೆ. ಮೃತರ ಅಂತ್ಯಕ್ರಿಯೆಯು 03-11-2024ರ ಭಾನುವಾರ ಸಂಜೆ 4 ಗಂಟೆಗೆ ನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ.

ವೀರಪ್ಪ ಭಾವಿ ಅವರು ಕಳೆದ 45 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. 30 ವರ್ಷಗಳಿಂದ ಇಂದಿನ ಸುದ್ಧಿ ಪತ್ರಿಕೆ ಸಂಪಾದಕರಾಗಿ, ದಾವಣಗೆರೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ, ವಿವಿಧ ಸಂಘ ಸಂಸ್ಥೆಗಳ ಸಂಚಾಲಕರಾಗಿ ವೀರೇಶ್ವರ ಮಠದ ಸಂಯೋಜಕರಾಗಿ ಕೆಲಸ ಮಾಡಿದ್ದಾರೆ. ಪತ್ರಿಕೋದ್ಯಮದ ಜೊತೆ ಸಮಾಜ ಸೇವೆ, ಶಿಕ್ಷಣ, ಆರೋಗ್ಯ ಸೇವಾ ಕ್ಷೇತ್ರಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದರು.

ಸಂತಾಪ;
ಅಗಲಿದ ಹಿರಿಯ ಪತ್ರಕರ್ತ ವೀರಪ್ಪ ಎಂ ಭಾವಿ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಉಪಾಧ್ಯಕ್ಷ ಮಂಡಿಬೆಲೆ ರಾಜಣ್ಣ , ವಿಜಯ ದರ್ಪಣ ಪತ್ರಿಕಾ ಬಳಗ  ಸಂತಾಪ ಸೂಚಿಸಿದ್ದಾರೆ.

WhatsApp

Join Now

Telegram

Join Now

Instagram

Join Now