--Ads--

ತುಮಕೂರಿನಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟ-2024

On: November 14, 2024 12:01 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ತುಮಕೂರಿನಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟ-2024

ಲಾಂಛನ ಅನಾವರಣ ಮಾಡಿದ
ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾ ಸಂಘ ಮತ್ತು ಜಿಲ್ಲಾಡಳಿತ ತುಮಕೂರು ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮ ನೆನಪಿನ ರಾಜ್ಯ ಮಟ್ಟದ ಕ್ರೀಡಾಕೂಟದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಕಾವೇರಿಯಲ್ಲಿ ಅನಾವರಣಗೊಳಿಸಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು.

ತುಮಕೂರಿನಲ್ಲಿ ಡಿಸೆಂಬರ್ ನಲ್ಲಿ ಆಯೋಜಿಸಲಿರುವ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರ ನೇತೃತ್ವದಲ್ಲಿ ಅಗತ್ಯ ಪೂರ್ವ ಸಿದ್ಧತೆಯನ್ನು ನಡೆಸುತ್ತಿದ್ದು ಉದ್ಘಾಟಿಸಲು ಸಮಯವಕಾಶ ಕೊಡಬೇಕೆಂದು ಮುಖ್ಯಮಂತ್ರಿಗಳನ್ನು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೇತೃತ್ವದ ನಿಯೋಗ ಮನವಿ ಮಾಡಿತು.

ಡಿಸೆಂಬರ್ ನಲ್ಲಿ ಸಮ್ಮೇಳನ ಮಾಡಿದರೆ ಅಧಿವೇಶನ ಇರುವುದರಿಂದ ಬರುವುದು ಕಷ್ಟವಾಗಬಹುದು. ಜನವರಿಯಲ್ಲಿ ಮಾಡಿದರೆ ಖಂಡಿತವಾಗಿ ಬರುತ್ತೇನೆ. ಅಗತ್ಯ ಸಹಕಾರವನ್ನು ಕೊಡಲು ತಿಳಿಸುತ್ತೇನೆ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಕ್ರೀಡಾಕೂಟ ಯಶಸ್ವಿಯಾಗಿ ನಡೆಯಲಿ ಎಂದು ಮತ್ತೊಮ್ಮೆ ಶುಭ ಹಾರೈಸಿದರು.

ಸಂಘದ ಜಿಲ್ಲಾಧ್ಯಕ್ಷ ಚಿ. ನಿ. ಪುರುಷೋತ್ತಮ್ ಹಾಗೂ ರಾಷ್ಟ್ರೀಯ ಮಂಡಳಿ ಸದಸ್ಯರಾದ ಅನು ಶಾಂತರಾಜು, ಟಿ.ಎನ್. ಮಧುಕರ್ , ಡಿ.ಎಂ.ಸತೀಶ್ ಮತ್ತು ಪದಾಧಿಕಾರಿಗಳು ನಿಯೋಗದಲ್ಲಿದ್ದರು.

ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಹಿಮಂತರಾಜು ಕ್ರೀಡಾ ಸಮಿತಿ ಮುಖ್ಯ ಸಂಚಾಲಕರಾದ ಸತೀಶ್ ಹಾರೋಗೆರೆ, ಯಶಸ್ ಪದ್ಮನಾಭ್, ಎಸ್. ಹರೀಶ್ ಆಚಾರ್ಯ ಮತ್ತಿತರರು ಹಾಜರಿದ್ದರು.

WhatsApp

Join Now

Telegram

Join Now

Instagram

Join Now