ನಮ್ಮ ಶೌಚಾಲಯ, ನಮ್ಮ ಗೌರವ ಆಂದೋಲನ
ವಿಜಯ ದರ್ಪಣ ನ್ಯೂಸ್…
ವಿಶ್ವ ಶೌಚಾಲಯ ದಿನ
ನ. 19 ರಿಂದ ಡಿ. 10 ರವರೆಗೆ ನಮ್ಮ ಶೌಚಾಲಯ, ನಮ್ಮ ಗೌರವ ಆಂದೋಲನ
ಬೆಂಗಳೂರು ಗ್ರಾ. ಜಿಲ್ಲೆ, ನ. 19 :- ಬೆಂಗಳೂರು ಗ್ರಾಮಾಂತರ ಜಿಲ್ಲೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮದಲ್ಲಿ ವಿಶ್ವ ಶೌಚಾಲಯ ದಿನವನ್ನು ಆಚರಿಸಲಾಯಿತು.
ವಿಶ್ವ ಶೌಚಾಲಯ ದಿನದ ಅಂಗವಾಗಿ ನವೆಂಬರ್ 19 ರಿಂದ ಡಿಸೆಂಬರ್ 10 ರವರೆಗೆ ನಡೆಯುವ ‘ನಮ್ಮ ಶೌಚಾಲಯ, ನಮ್ಮ ಗೌರವ ಆಂದೋಲನ’ಕ್ಕೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಶಾಂತಕುಮಾರ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿ ಪ್ರತಿಯೊಬ್ಬರು ತಮ್ಮ ಮನೆ, ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಚವಾಗಿ, ನೈರ್ಮಲ್ಯದಿಂದ ಕಾಪಾಡಬೇಕು. ನೈರ್ಮಲ್ಯ ಕಾಪಾಡುವುದರಿಂದ ನಮ್ಮ ಆರೋಗ್ಯ ವೃದ್ಧಿಸಿಕೊಳ್ಳಬಹುದು. ಹಾಗಾಗಿ ಪ್ರತಿಯೊಬ್ಬರೂ ಬಯಲು ಶೌಚ ಮಾಡುವುದನ್ನು ಬಿಟ್ಟು ಮನೆ ಶೌಚಾಲಯಗಳನ್ನು ಬಳಸುವ ಜತೆಗೆ ಸುತ್ತ ಮುತ್ತಲಿನ ಪ್ರತಿಯೊಬ್ಬ ಜನರು ಶೌಚಾಲಯ ಬಳಸುವಂತೆ ಪ್ರೇರಣೆ ತುಂಬಬೇಕು. ಪ್ರತಿಯೊಬ್ಬರೂ ಸಾರ್ವಜನಿಕ ಶೌಚಾಲಯಗಳನ್ನು ನಮ್ಮ ಮನೆ ಶೌಚಾಲಯಗಳಂತೆ ಬಳಸಿಕೊಂಡ ಬಯಲು ಶೌಚ್ಛ ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಹೇಳಿದರು.
ಈ ವೇಳೆ ಶೌಚಾಲಯ ಬಳಕೆ ಹಾಗೂ ಸ್ವಚ್ಛತೆಯ ಕುರಿತು ಗ್ರಾಮಸ್ಥರಿಗೆ ಅರಿವು ಮೂಡಿಸುವ ದೃಷ್ಟಿಯಿಂದ ಗ್ರಾಮದಲ್ಲಿ ಜಾಗೃತಿ ಜಾಥಾ ನಡೆಸಲಾಯಿತು.
ಈ ಸಂದರ್ಭದಲ್ಲಿ ದೇವನಹಳ್ಳಿ ತಾ.ಪಂ ಇಒ ಶ್ರೀನಾಥಗೌಡ ಅವರು ಶೌಚಾಲಯ ಬಳಕೆ ಹಾಗೂ ನೈರ್ಮಲ್ಯ ಕಾಪಾಡುವ ಕುರಿತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಕುಂದಾಣ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೇತ್ರಾವತಿ ನಾಗೇಶ್, ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಜಿ.ಪಂ ಯೋಜನಾ ನಿರ್ದೇಶಕ ವಿಠಲ್ ಕಾವ್ಳೆ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುನೀಲಕುಮಾರ, ಕುಂದಾಣ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಕುಮಾರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗಿಯಾಗಿದ್ದರು.
ಹೊಲಿಗೆ, ವಿಡಿಯೋಗ್ರಫಿ, ಜಿಮ್ ತರಬೇತಿಗಾಗಿ ಪ.ಜಾತಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನ.
ಬೆಂಗಳೂರು ಗ್ರಾ.ಜಿಲ್ಲೆ, ನ.19, 2024 :- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಉಪ ಯೋಜನೆಯಡಿ ಹೊಲಿಗೆ ತರಬೇತಿ, ವಿಡಿಯೋಗ್ರಫಿ ತರಬೇತಿ ಮತ್ತು ಜಿಮ್/ಫಿಟ್ನೆಸ್ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಪರಿಶಿಷ್ಟ ಜಾತಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೊಲಿಗೆ ತರಬೇತಿ ಶಿಬಿರಕ್ಕೆ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ (ಪಾಸ್/ಫೇಲ್) 18 ರಿಂದ 40 ವಯಸ್ಸಿನ ಆಸಕ್ತರಿಗೆ ನ. 28 ರಿಂದ ಡಿ. 17 ರ ವರೆಗೆ ಹಾಗೂ ವಿಡಿಯೋಗ್ರಫಿ ತರಬೇತಿ ಶಿಬಿರಕ್ಕೆ ದ್ವಿತೀಯ ಪಿಯುಸಿ (ಪಾಸ್/ಫೇಲ್) ವಿದ್ಯಾರ್ಹತೆ ಪಡೆದ 18 ರಿಂದ 40 ವರ್ಷ ವಯಸ್ಸಿನವರಿಗೆ ಡಿ. 06 ರಿಂದ ಡಿ. 17 ರವರೆಗೆ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ತರಬೇತಿ ಶಿಬಿರ ನಡೆಯಲ್ಲಿದ್ದು, ಜಿಮ್/ಫಿಟ್ನೆಸ್ ತರಬೇತಿ ಶಿಬಿರಕ್ಕೆ ದ್ವಿತೀಯ ಪಿಯುಸಿ (ಪಾಸ್/ಫೇಲ್) ವಿದ್ಯಾರ್ಹತೆ ಪಡೆದ 18 ರಿಂದ 40 ವರ್ಷ ವಯಸ್ಸಿನವರಿಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ತರಬೇತಿ ಶಿಬಿರ ನಡೆಯಲಿದೆ.
ಆಸಕ್ತ ಯುವಕ/ಯುವತಿಯರು ನವ್ಹೆಂಬರ್ 25ರ ಒಳಗಾಗಿ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಸಹಾಯಕ ನಿರ್ದೇಶಕರ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಭವನ, 1ನೇ ಮಹಡಿ, ಕೊಠಡಿ ಸಂ: 112 ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ಇಲ್ಲಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ: 9632778567 & 080-29787443 ಗೆ ಸಂಪರ್ಕಿಸಬಹುದಾಗಿದೆ ಎಂದು ಯವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.