--Ads--

ಗ್ರಾಮೀಣಾಭಿವೃದ್ಧಿ ಯೋಜನೆಗಳ ಮಾಹಿತಿ ಸಂಗ್ರಹ ಮಾಡಿದ ಕೇಂದ್ರ ತಂಡ

On: November 26, 2024 4:18 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಕೇಂದ್ರ ತಂಡ ಭೇಟಿ

ಗ್ರಾಮೀಣಾಭಿವೃದ್ಧಿ ಯೋಜನೆಗಳ ಮಾಹಿತಿ ಸಂಗ್ರಹ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಗ್ ನ. 26 :- ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ನವದೆಹಲಿಯಿಂದ ಡಾ. ಗಾಡಧರ್ ಮಹಾಪತ್ರ ರವರ ತಂಡವು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಭೇಟಿ ನೀಡಿ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಡಿಪಾರ್ಟ್‌ಮೆಂಟ್ ಆಫ್ ಪರ್ಸನಲ್ ಮತ್ತು ಟ್ರೈನಿಂಗ್ ಭಾರತ ಸರ್ಕಾರ ಇವರ ಆಶ್ರಯದೊಂದಿಗೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ ಅಡ್ಮಿನಿಸ್ಟ್ರೇಷನ್ (IPA) ಸಂಸ್ಥೆಯ ಹತ್ತು ತಿಂಗಳ ಕಾಲ Advanced Professional Program in Public Administration (APPPA) ವಾರ್ಷಿಕ ಫ್ಲಾಗ್ ಶಿಫ್ ಕಾರ್ಯಕ್ರಮ ಭಾಗವಾಗಿ ಕರ್ನಾಟಕ ರಾಜ್ಯಕ್ಕೆ 14 ಹಿರಿಯ ಅಧಿಕಾರಿಗಳ ತಂಡ ಗ್ರಾಮೀಣ ಶೈಕ್ಷಣಿಕ ಭೇಟಿಯಲ್ಲಿ ಜಿಲ್ಲೆಯಲ್ಲಿ ಅನುಷ್ಠಾನವಿರುವ ಗ್ರಾಮೀಣಾಭಿವೃದ್ಧಿ ಯೋಜನೆಗಳ ಬಗ್ಗೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಎನ್ ಅನುರಾಧ ಅವರಿಂದ ಮಾಹಿತಿ ಪಡೆದರು.

ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಕೆ ಎನ್ ರವರು ಪಿಪಿಟಿ ಪ್ರದರ್ಶನ ಮೂಲಕ ಮಾಹಿತಿ ನೀಡಿ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ, ಜಲ ಜೀವನ್ ಮಿಷನ್, 15ನೇ ಹಣಕಾಸು, ಸ್ವಚ್ಚ ಭಾರತ್‌ ಮಿಷನ್, ಎನ್ ಅರ್ ಎಲ್ ಎಮ್ ಯೋಜನೆ, ಕೂಸಿನ ಮನೆ, ಗ್ರಂಥಾಲಯ, ವಸತಿ ಯೋಜನೆಗಳು, ಅಟಲ್ ಭೂಜಲ್ ಯೋಜನೆ ಹಾಗೂ ಇತರೆ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿರುವುದನ್ನು ಸವಿವರವಾಗಿ ಮಂಡಿಸಿದರು.

ನಂತರ APPPA ವಾರ್ಷಿಕ ಫ್ಲಾಗ್ ಶಿಪ್ ಕಾರ್ಯಕ್ರಮದ 14 ಹಿರಿಯ ಅಧಿಕಾರಿಗಳ ತಂಡವು ಗ್ರಾಮೀಣಾಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮೆಚ್ಚುಗೆ ವ್ಯಕ್ತಿಪಡಿಸಿರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಮುಖ್ಯ ಯೋಜನಾ ಅಧಿಕಾರಿ ರಾಮಕೃಷ್ಣಯ್ಯ, ಯೋಜನಾ ನಿರ್ದೇಶಕರು ವಿಠ್ಠಲ್‌ ಕಾವ್ಳೆ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now