ಉತ್ತರ ಕನಾ೯ಟಕದ ಪ್ರಗತಿಗೆ ಒತ್ತು: ಸ್ಪೀಕರ್ ಯು.ಟಿ. ಖಾದರ್

ವಿಜಯ ದರ್ಪಣ ನ್ಯೂಸ್…

ಡಿಸೆಂಬರ್ 9 ರಿಂದ ಬೆಳಗಾವಿಯಲ್ಲಿ ವಿಧಾನಮಂಡಳ ಅಧಿವೇಶನ

ಉತ್ತರ ಕನಾ೯ಟಕದ ಪ್ರಗತಿಗೆ ಒತ್ತು: ಸ್ಪೀಕರ್ ಯು.ಟಿ. ಖಾದರ್

ಮಂಗಳೂರು: ನ.28: ರಾಜ್ಯ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 19 ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.

ಅವರು ಗುರುವಾರ ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಇರುವುದರಿಂದ ಅಧಿವೇಶನವನ್ನು ಡಿಸೆಂಬರ್ 19 ಕ್ಕೆ ಮುಕ್ತಾಯಗೊಳಿಸಲು ಸರ್ಕಾರವು ನಿರ್ಧರಿಸಿದೆ. ಅಧಿವೇಶನ ಮುಂದುವರಿಸುವ ಕುರಿತು ಡಿಸೆಂಬರ್ 9ರಂದು ಸ್ಪೀಕರ್ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಕಾನೂನು ಸಚಿವರು ಎಲ್ಲಾ ರಾಜಕೀಯ ಮುಖಂಡರು, ವಿರೋಧ ಪಕ್ಷದ ಮುಖಂಡರು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಅಧಿವೇಶನದಲ್ಲಿ ರಾಜ್ಯದ ಅಭಿವೃದ್ಧಿ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಚರ್ಚೆಯಾಗಬೇಕಿದೆ. ಇದರಿಂದ ಆ ಭಾಗದ ಜನರ ಭಾವನೆಗಳನ್ನು ಗೌರವಿಸಿದಂತಾಗುತ್ತದೆ. ಈ ನಿಟ್ಟಿನಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಫಕ್ಷ ಸಹಕರಿಸಬೇಕು ಎಂದು ಸ್ಪೀಕರ್ ಮನವಿ ಮಾಡಿದರು.

&&&&&&&&&&&&&&#####&&&&&&

ದೇವನಹಳ್ಳಿ: ನವೆಂಬರ್ 30ರಂದು ಜಿಲ್ಲಾ ಮಟ್ಟದ ಯುವಜನೋತ್ಸವ

ಬೆಂಗಳೂರು ಗ್ರಾಮಾಂತರ ಜಿಲ್ಲೆ ನ.30, :

ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ನವದೆಹಲಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಜಿಲ್ಲಾ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಟಮಕ ಕೋಲಾರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದೇವನಹಳ್ಳಿ ಇವರ ಸಹಯೋಗದೊಂದಿಗೆ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು
ನವೆಂಬರ್ 30 (ಶನಿವಾರ) ರಂದು ಬೆಳಗ್ಗೆ 10:30 ಗಂಟೆಗೆ ದೇವನಹಳ್ಳಿ ಟೌನ್ ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

@@@@@@@@@@@₹₹₹₹₹@@@@@@@

ನವೆಂಬರ್  30 ರಿಂದ ಡಿಸೆಂಬರ್ 3 ರವರೆಗೆ ಸಾಧಾರಣ ಮಳೆಯಾಗುವ ಸಾದ್ಯತೆ: ಮುನ್ನೆಚ್ಚರಿಕೆ ಅಗತ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ನ.28 :-

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನವೆಂಬರ್ 30 ರಿಂದ ಡಿಸೆಂಬರ್ 3 ರವರೆಗೆ 5 ಮಿ.ಮೀ ಸಾಧಾರಣ ಮಳೆಯಾಗುವ ಸಾದ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಮಾಹಿತಿ ನೀಡಿದೆ.

ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರಾಗಿ ಬೆಳೆಯ ಕಟಾವು ಕಾರ್ಯ ಪ್ರಗತಿಯಲ್ಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರೈತರು ಕಟಾವಾದ ಬೆಳೆಯನ್ನು ಮಳೆಯಲ್ಲಿ ನೆನೆಯದಂತೆ ಟಾರ್ಪಲಿನ್ ಹೊದಿಕೆಯಿಂದ ಸಂರಕ್ಷಿಸಿಕೊಳ್ಳಬೇಕು ಹಾಗೂ ಒಂದು ವೇಳೆ ರಾಗಿ ಬೆಳೆ ಕಟಾವು ಮಾಡದೇ ಇರುವ ಸಂದರ್ಭದಲ್ಲಿ ಈ ದಿನಗಳಲ್ಲಿ ಕೊಯ್ಲು ಮಾಡಲು ಸೂಕ್ತವಿರುವುದಿಲ್ಲ, ಆದ್ದರಿಂದ ಮಳೆ ಪ್ರಮಾಣ ಕಡಿಮೆಯಾದ ಮೇಲೆ ರಾಗಿ ಕಟಾವು ಮಾಡಬೇಕು ಎಂದು ಕೃಷಿ ಇಲಾಖೆ ತಿಳಿಸಿದೆ.