--Ads--

ಡಾ. ಬಿ.ಆರ್ ಅಂಬೇಡ್ಕರ್ ರವರ ಮಹಾ ಪರಿನಿರ್ವಾಣ ದಿನಾಚರಣೆ

On: December 6, 2024 5:15 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಜಿಲ್ಲಾಡಳಿತ ಭವನದಲ್ಲಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಮಹಾ ಪರಿನಿರ್ವಾಣ ದಿನಾಚರಣೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ,ಡಿ 6 : ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರ 68ನೇ ಮಹಾ ಪರಿನಿರ್ವಾಣ ದಿನವನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿಂದು ಆಚರಿಸಲಾಯಿತು.

ಡಾ.ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ನಂತರ ಮಾತನಾಡಿ ಡಾ.ಬಿ.ಆರ್ ಅಂಬೇಡ್ಕರ್ ಅವರು ಬಡವರ ದೀನ ದಲಿತರ, ಶೋಷಿತ ವರ್ಗಗಳ ಅಭಿವೃದ್ಧಿಗೆ ದುಡಿದರು. ಸಾಮಾಜದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ ಸಿಗಬೇಕು ಎನ್ನುವುದು ಅವರ ಆಶಯವಾಗಿತ್ತು. ಪ್ರತಿಯೊಬ್ಬರೂ ಡಾ. ಬಿ.ಆರ್ ಅಂಬೇಡ್ಕರ್ ಅವರ ಮಾರ್ಗದರ್ಶನ ಹಾಗೂ ಸಂವಿಧಾನದ ಆಶಯಗಳನ್ನು ಪಾಲಿಸೋಣ ಎಂದು ಜಿಲ್ಲಾಧಿಕಾರಿ ತಿಳಿಸಿದರು.

‌‌ ಅಪರ ಜಿಲ್ಲಾಧಿಕಾರಿ ಎಚ್. ಅಮರೇಶ್, ಜಿ ಪಂ ಉಪ ಕಾರ್ಯದರ್ಶಿ ಟಿ ಕೆ ರಮೇಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಟಿ ಎಲ್ ಪ್ರೇಮಾ ಸೇರಿದಂತೆ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

21ನೇ ರಾಷ್ಟ್ರೀಯ ಜಾನುವಾರು ಗಣತಿಗೆ ಸಚಿವರಿಂದ ಚಾಲನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ: 21ನೇ ರಾಷ್ಟ್ರೀಯ ಜಾನುವಾರು ಗಣತಿ ಸಮೀಕ್ಷೆಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಪೋಸ್ಟರ್ ಬಿಡುಗಡೆಗೊಳಿಸುವ ಮೂಲಕ ಚಾಲನೆ ನೀಡಿದರು.

ನಂತರ ಮಾತನಾಡಿ ಜಾನುವಾರು ಗಣತಿ ಸಮೀಕ್ಷೆಯಲ್ಲಿ ಎಲ್ಲಾ ಜಾನುವಾರುಗಳ ಸವಿವರ ಗಣತಿ ಸಂಗ್ರಹಿಸಲಾಗುವುದು. ಹೈನುಗಾರಿಕೆ ಹಾಗೂ ಕೃಷಿ ಕ್ಷೇತ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಆಧುನಿಕ ತಂತ್ರಜ್ಞಾನದ ಮೂಲಕ ನಿಖರವಾಗಿ ಜಾನುವಾರು ಗಣತಿ ಮಾಡಲಾಗುವುದು. ಈ ಸಮೀಕ್ಷಾ ವರದಿ ಪಶುಸಂಗೋಪನೆ ಅಭಿವೃದ್ಧಿ, ಮೇವಿನ ಲಭ್ಯತೆ, ಆರೋಗ್ಯ, ಔಷಧೋಪಚಾರ, ಉತ್ಪಾದಕತೆ ಹೆಚ್ಚಿಸಲು, ಯೋಜನೆ ರೂಪಿಸಲು ಸಹಕಾರಿಯಾಗಲಿದೆ ಎಂದು ಸಚಿವರು ತಿಳಿಸಿದರು.

WhatsApp

Join Now

Telegram

Join Now

Instagram

Join Now