--Ads--

ಪ್ರಜಾಪ್ರಭುತ್ವದ ಉಳಿವಿಗಾಗಿ ಕಡ್ಡಾಯ ಮತದಾನ ಅವಶ್ಯ: ನ್ಯಾ. ಭೋಲಾ ಪಂಡಿತ್

On: January 25, 2025 1:34 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಜಿಲ್ಲಾಡಳಿತ ಭವನದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ

ಪ್ರಜಾಪ್ರಭುತ್ವದ ಉಳಿವಿಗಾಗಿ ಕಡ್ಡಾಯ ಮತದಾನ ಅವಶ್ಯ: ನ್ಯಾ. ಭೋಲಾ ಪಂಡಿತ್

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಜ.25 : 18 ವರ್ಷ ತುಂಬಿದ ಪ್ರತಿಯೊಬ್ಬ ಪ್ರಜೆಯು ನಿರ್ಭೀತರಾಗಿ, ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ಪ್ರಜಾಪ್ರಭುತ್ವದ ಉಳಿವಿಗಾಗಿ ಕಡ್ಡಾಯವಾಗಿ ಮತದಾನ ಮಾಡುವದು ಅವಶ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾಯಮೂರ್ತಿ ಭೋಲಾ ಪಂಡಿತ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ʼʼರಾಷ್ಟ್ರೀಯ ಮತದಾರರ ದಿನಾಚರಣೆʼʼ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತ ದೇಶದಲ್ಲಿ 2024 ರ ಮತದಾರರ ಪಟ್ಟಿ ಪ್ರಕಾರ 27 ಕೋಟಿಯಷ್ಟು ಯುವ ಮತದಾರರು ಇದ್ದಾರೆ. ಭಾರತ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶ. ನಮ್ಮ ಒಂದು ಮತದಿಂದ ದೇಶಕ್ಕೆ ಉತ್ತಮ ನಾಯಕನನ್ನು ಆಯ್ಕೆ ಮಾಡಿಕೊಳ್ಳುವ ಶಕ್ತಿವಿದೆ. ಯಾರು ಮತ ಚಲಾಯಿಸದೆ ಅತ್ಯಮೂಲ್ಯವಾದ ಹಕ್ಕಿನಿಂದ ವಂಚಿವರಾಗಬಾರದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಅವರು ಮಾತನಾಡಿ ಜಿಲ್ಲೆಯ 18 ವರ್ಷ ಮೇಲ್ಪಟ್ಟ ಅರ್ಹ ಪ್ರಜೆಗಳು ಮತದಾರರಾಗಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿಯಾಗುವ ಜೊತೆಗೆ ಪ್ರತಿ ಚುನಾವಣೆಯಲ್ಲಿ ಭಾಗಿಯಾಗಿ ಮತ ಚಲಾಯಿಸಬೇಕು. ಈ ದಿನದ ಉದ್ದೇಶ ಮತದಾನ ಬಗ್ಗೆ ತಿಳುವಳಿಕೆ, ಜಾಗೃತಿ ನೀಡುವುದು. ಯುವ ಮತದಾರರ ನೋಂದಾಯಿಸಲು ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಮಟ್ಟದಲ್ಲಿ ಸಾಕಷ್ಟು ಕಾರ್ಯಕ್ರಮ ಮಾಡಲಾಗಿದೆ ಎಂದು ಹೇಳಿದರು.

ಮತದಾನವನ್ನು ನಿರ್ಭಿತಿಯಿಂದ ಯಾವುದೇ ಆಮಿಷಕ್ಕೆ ಒಳಗಾಗದೆ ಮತ ಚಲಾವಣೆ ಮಾಡಬೇಕು.
ಮತದಾನವನ್ನು ಹಬ್ಬದಂತೆ ಯುವ ಜನತೆ ಸಹ ಉತ್ಸುಕರಾಗಿ ಮತದಾನದ ಕಾರ್ಯದಲ್ಲಿ ತೊಡಗಿಕೊಳ್ಳಬೇಕು. ಶಾಲಾ ಮಕ್ಕಳು ತಮ್ಮ ಪೋಷಕರು ಹಾಗೂ ಸುತ್ತಮುತ್ತಲಿನ ಜನರಲ್ಲಿ ಮತ ಚಲಾಯಿಸುವ ಕುರಿತು ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಎನ್ ಅನುರಾಧ ಅವರು ಮಾತನಾಡಿ, ಎಲ್ಲಾ ಪ್ರಜೆಗಳಿಗೆ ಮತದಾನ ಹಕ್ಕು ಮಾತ್ರವಲ್ಲ, ಅದು ಜವಾಬ್ದಾರಿ. ಜಿಲ್ಲೆಯಲ್ಲಿನ 18 ವರ್ಷ ತುಂಬಿದ ಎಲ್ಲಾ ಪ್ರಜೆಗಳು ಕೂಡ ಮತದಾರರಾಗಿ ನೊಂದಣಿ ಮಾಡಿಸಿಕೊಂಡು ಮತದಾನ ಮಾಡಬೇಕು. ಪ್ರತಿಯೊಂದು ಬಾರಿ ಒಂದೊಂದು ಧ್ಯೇಯ ವಾಕ್ಯದೊಂದಿಗೆ ಕಾರ್ಯಕ್ರಮ ಆಚರಿಸಲಾಗುತ್ತದೆ. ಈ ಬಾರಿ ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುತ್ತೇನೆ ಎಂಬ ಧ್ಯೇಯ ವಾಕ್ಯ ನೀಡಲಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ 9 ಲಕ್ಚದ 5 ಸಾವಿರ ರಷ್ಟು ಮತದಾರರು ಇದ್ದು, ಯುವ ಮತದಾರರು ಹೆಚ್ಚಾಗಿ ಮತದಾನದಲ್ಲಿ ಪಾಲ್ಗೊಳ್ಳಬೇಕು. ಸ್ವೀಪ್ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನದ ಪ್ರಮಾಣ ಮತ್ತಷ್ಟು ಹೆಚ್ಚಿಸಲು ಮತದಾರರಲ್ಲಿ ಪ್ರೇರಿಪಿಸಲಾಗುತ್ತಿದೆ. ಜಿಲ್ಲೆಯ ಸ್ವೀಪ್ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಅಧಿಕಾರಿಗಳು ಕೆಲಸ ಮಾಡಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಹೊಸದಾಗಿ ನೊಂದಣಿಯಾದ ಯುವ ಮತದಾರರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಮತದಾನದ ಜಾಗೃತಿ ಬಗ್ಗೆ ನಡೆಸಲಾದ ಕಿರುಚಿತ್ರ, ಪ್ರಬಂಧ, ರಸಪ್ರಶ್ನೆ ಸೇರಿದಂತೆ ಸಾಕಷ್ಟು ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರತಿಜ್ಞಾ ವಿಧಿಯನ್ನು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಅವರು ಭೋದಿಸಿದ್ದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಯಲ ಆಂಜನಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಕಾರಿಗಳು, ವಿವಿಧ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

WhatsApp

Join Now

Telegram

Join Now

Instagram

Join Now