--Ads--

ಗೋದಾವರಿ – ಕಾವೇರಿ ನದಿ ಜೋಡಣೆ: ದೇವೇಗೌಡ ಆಗ್ರಹ

On: February 14, 2025 4:17 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಗೋದಾವರಿ – ಕಾವೇರಿ ನದಿ ಜೋಡಣೆ: ದೇವೇಗೌಡ ಆಗ್ರಹ

ನವದೆಹಲಿ: ‘ನದಿ ಜಲ ಸಂಪನ್ಮೂಲ ಸದ್ವಿನಿಯೋಗಕ್ಕೆ ಎಲ್ಲಾ ಪರಿಣಾಮಕಾರಿ ಕ್ರಮಗಳ ಅಗತ್ಯವಿದೆ. ಅದಕ್ಕೆ ದೀರ್ಘಾವಧಿ ಕಾರ್ಯಕ್ರಮಗಳ ಅನುಷ್ಠಾನ ಅಗತ್ಯವಿದೆ. ಆದ್ದರಿಂದ ಗೋದಾವರಿ-ಕಾವೇರಿ ನದಿ ಜೋಡಣೆ ಯೋಜನೆಗೆ ಆದ್ಯತೆ ನೀಡಬೇಕು ಎಂದು ಮಾಜಿ ಪ್ರಧಾನಮಂತ್ರಿ  ಎಚ್.ಡಿ.ದೇವೇಗೌಡ ಆಗ್ರಹಿಸಿದರು.

ರಾಜ್ಯಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಗುರುವಾರ ಪಾಲ್ಗೊಂಡು ಮಾತನಾಡಿದ ಅವರು, ಬೆಂಗಳೂರಿನ ಕುಡಿಯುವ ನೀರಿನ ಬವಣೆಯ ಬಗ್ಗೆ ಮತ್ತೊಮ್ಮೆ ಗಮನ ಸೆಳೆದರು.

ಬೆಂಗಳೂರಿನಲ್ಲಿ ನೀರಿನ ಟ್ಯಾಂಕರ್‌ಗಳು ಬಡ ನಿವಾಸಿಗಳನ್ನು ಶೋಷಿಸುತ್ತಿವೆ ಎಂಬ ಅಂಶವನ್ನು ಸದನದ ಗಮನಕ್ಕೆ ತಂದ ಅವರು, ಹಣಕಾಸು ಸಚಿವರು ಕುಡಿಯುವ ನೀರಿನ ಯೋಜನೆಗೆ ₹1,400 ಮಂಜೂರು ಮಾಡಿದ್ದಾರೆ. ಆದರೆ, ದೀರ್ಘಾವಧಿಯ ನೀರಿನ ಭದ್ರತೆಯನ್ನು ಖಚಿತಪಡಿಸಿ ಕೊಳ್ಳಲು ಗೋದಾವರಿ-ಕಾವೇರಿ ಜೋಡಣೆಗೆ ಆದ್ಯತೆ ನೀಡಬೇಕು’ ಎಂದು ಸಲಹೆ ನೀಡಿದರು.

ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದಿಂದ ಯುವಜನರು ನಗರಗಳಿಗೆ ವಲಸೆ ಬರುವ ಪ್ರಮಾಣ ಹೆಚ್ಚುತ್ತಲೇ ಇದೆ ಎಂದು ಕಳವಳ ವ್ಯಕ್ತಪಡಿಸಿದರು.

ಬೆಂಗಳೂರಿನ ಜನಸಂಖ್ಯೆ ಈಗ 1.40 ಕೋಟಿಗೆ ಮುಟ್ಟಿದೆ. ಎಲ್ಲ ಯುವಕರು ತಮ್ಮ ವಿದ್ಯಾಭ್ಯಾಸ ಮುಗಿದ ತಕ್ಷಣ ಹಳ್ಳಿಗಳನ್ನು ತೊರೆದು ನಗರಗಳಿಗೆ ಬಂದು ಸೇರುತ್ತಿದ್ದಾರೆ. ಇದು ಜೀವನೋಪಾಯದ ಸಮತೋಲನವನ್ನು ತಪ್ಪಿಸುತ್ತಿದೆ. ಯುವಕರಿಗೆ ತಮ್ಮ ಪ್ರದೇಶ ಗಳಿಗಳಲ್ಲಿಯೇ ಹೆಚ್ಚೆಚ್ಚು ಉದ್ಯೋಗಾವಕಾಶ ಕಲ್ಪಿಸುವ ಅಗತ್ಯವಿದೆ ಎಂದು ಹೇಳಿದರು.

ಕೃಷಿ ಉತ್ಪನ್ನಗಳಿಗೆ ಹೆಚ್ಚು ಬೆಂಬಲ ನೀಡುವುದನ್ನು ನಾವು ಮುಂದುವರಿಸಬೇಕು. ಬಿಹಾರದಲ್ಲಿ ಮಖಾನಾ ಮಂಡಳಿ ರಚನೆ ಮಾಡಿರುವುದನ್ನು ಸ್ವಾಗತಿಸುತೇನೆ. ಅದೇ ರೀತಿ ಹಲಸಿನ ಹಣ್ಣು, ನೇರಳೆ, ಹುಣಸೆಹಣ್ಣು ಮಂಡಳಿ ರಚಿಸಬೇಕು ಎಂದು ಒತ್ತಾಯಿಸಿದರು.

WhatsApp

Join Now

Telegram

Join Now

Instagram

Join Now