--Ads--

ಕೃಷಿ ಹೊಂಡಗಳಿಗೆ ತಂತಿ ಬೇಲಿ ನಿರ್ಮಿಸಿ ಅನಾಹುತ ತಪ್ಪಿಸಿ

On: February 17, 2025 3:49 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಕೃಷಿ ಹೊಂಡಗಳಿಗೆ ತಂತಿ ಬೇಲಿ ನಿರ್ಮಿಸಿ ಅನಾಹುತ ತಪ್ಪಿಸಿ

ಕೃಷಿ ಹೊಂಡ ಬಳಿ “ಅಪಾಯ” ಮತ್ತು “ಈಜಬಾರದು” ಎಂಬ ಸೂಚನಾ ಫಲಕ ಅಳವಡಿಸಿ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾ.ಜಿಲ್ಲೆ.ಫೆಬ್ರವರಿ17: ಬೇಸಿಗೆ ಪ್ರಾರಂಭವಾಗಿದ್ದು, ಕೃಷಿ ಹೊಂಡದಲ್ಲಿ ಮಕ್ಕಳು ಈಜಲು ಮತ್ತು ಜಾನುವಾರುಗಳು ನೀರು ಕುಡಿಯಲು ಬಂದಂತಹ ಸಂದರ್ಭದಲ್ಲಿ ಬೀಳುವ ಸಂಭವವಿದ್ದು, ಈ ಹಿಂದೆ ನಿರ್ಮಿಸಿರುವ ಕೃಷಿ ಹೊಂಡಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಲು ಕೃಷಿ ಇಲಾಖೆ ರೈತರಲ್ಲಿ ಮನವಿ ಮಾಡಿದೆ.

ಕೃಷಿ ಇಲಾಖೆಯ ಬಹುಪಯೋಗಿ ಯೋಜನೆಯಾದ ಕೃಷಿ ಭಾಗ್ಯ ಯೋಜನೆಯನ್ನು 2014-15 ನೇ ಸಾಲಿನಿಂದ ಅನುಷ್ಟಾನ ಮಾಡಲಾಗಿರುತ್ತದೆ. ಬೇಸಾಯ ಮಾಡುವ ರೈತರಿಗೆ ನೀರಿನ ಸಂಗ್ರಹಣೆಗಾಗಿ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡಗಳನ್ನು ನಿರ್ಮಿಸಿಲಾಗಿರುತ್ತದೆ. ತದನಂತರ ತೋಟಗಾರಿಕಾ/ನರೇಗಾ ಯೋಜನೆಯಡಿ ಕೂಡ ಕೃಷಿ ಹೊಂಡಗಳ ನಿರ್ಮಾಣವಾಗಿರುತ್ತವೆ.

ಕೃಷಿ ಹೊಂಡಗಳಿಗೆ ಸೂಕ್ತವಾದ ರಕ್ಷಣಾ ಕ್ರಮಗಳನ್ನು ಅಳವಡಿಸದೆ ಇರುವದರಿಂದ ಕೃಷಿ ಹೊಂಡಗಳಲ್ಲಿ ಜೀವ ಹಾನಿಯಾಗುತ್ತಿರುವ ಪ್ರಕರಣಗಳು ದಾಖಲಾಗುತ್ತಿವೆ. ಈ ಕುರಿತು ರೈತರಲ್ಲಿ ಅರಿವು ಮೂಡಿಸುವ ಕ್ರಮವನ್ನು ಕೈಗೊಳ್ಳಲಾಗಿದೆ.

ಕೃಷಿ ಹೊಂಡದ ಸುತ್ತಲು ತಂತಿ ಬೇಲಿ / ನೆರಳು ಪರದೆ / ತಮ್ಮಲ್ಲಿ ಲಭ್ಯವಿರುವ ಸಂಪನ್ಮೂಲಗಳಿಂದ ಬೇಲಿ ಆಳವಡಿಸುವುದು ಕಡ್ಡಾಯವಾಗಿರುತ್ತದೆ. ಕೃಷಿ ಹೊಂಡದ ಮುಂದೆ “ಅಪಾಯ” ಮತ್ತು “ಈಜಬಾರದು” ಎಂಬ ಸೂಚನಾ ಫಲಕವನ್ನು ಕಡ್ಡಾಯವಾಗಿ ಹಾಕಲು ಈ ಮೂಲಕ ತಿಳಿಸಿದೆ.

ಕೃಷಿ ಹೊಂಡಗಳಲ್ಲಿ ಸುರಕ್ಷತಾ ಕ್ರಮವಾಗಿ ಹಗ್ಗದೊಂದಿಗೆ ಟ್ಯೂಬ್‌ಗಳನ್ನು ನಾಲ್ಕೂ ಮೂಲೆಗಳಲ್ಲಿ ಇಳಿ ಬಿಡಲು ತಿಳಿಸಿದೆ.

ಈ ನಿಟ್ಟಿನಲ್ಲಿ ರೈತ ಬಾಂಧವರು ತಮ್ಮ ಜಮೀನಿನಲ್ಲಿರುವ ಮುಖ್ಯವಾಗಿ ಮನೆಯ ಸಮೀಪವಿರುವ, ರಸ್ತೆ ಪಕ್ಕದಲ್ಲಿರುವ ಎಲ್ಲಾ ಕೃಷಿ ಹೊಂಡಗಳಿಗೆ ಸುರಕ್ಷಿತ ಕ್ರಮ ಕೈಗೊಳ್ಳಬೇಕು.

ರೈತರು ತಮ್ಮ ಕೃಷಿ ಹೊಂಡಗಳಿಗೆ ಸೂಕ್ತವಾದ ರಕ್ಷಣಾ ಕ್ರಮಗಳನ್ನು ಆಳವಡಿಸಿ ಪ್ರಾಣ ಹಾನಿಯನ್ನು ತಪ್ಪಿಸಲು ಸಹಕರಿಸಬೇಕೆಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp

Join Now

Telegram

Join Now

Instagram

Join Now