ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಆರಂಭ: ಜಿಲ್ಲಾಧಿಕಾರಿ ಎ.ಬಿ ಬಸವರಾಜು
ವಿಜಯ ದರ್ಪಣ ನ್ಯೂಸ್…..
ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಆರಂಭ: ಜಿಲ್ಲಾಧಿಕಾರಿ ಎ.ಬಿ ಬಸವರಾಜು
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಮಾ.03: ನೊಂದಾಯಿತ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಗೆ ಮಾರ್ಚ್ 01ರಿಂದ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದ್ದು ಮಾರ್ಚ್ 03 ರಿಂದ ಜಿಲ್ಲೆಯ ಎಲ್ಲಾ ತಾಲ್ಲೂಕು ಖರೀದಿ ಕೇಂದ್ರಗಳಲ್ಲಿ ರಾಗಿ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುತ್ತಿದ್ದು, ನೋಂದಾಯಿತ ರೈತರು ಸಂಬಂಧಪಟ್ಟ ತಾಲ್ಲೂಕುಗಳ ಖರೀದಿ ಕೇಂದ್ರಗಳಿಗೆ ರಾಗಿಯನ್ನು ನಿಯಮಾನುಸಾರ ನೀಡಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.
2024-25 ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಮಾಡಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳಲ್ಲಿ ರಾಗಿ ಖರೀದಿ ಕೇಂದ್ರಗಳನ್ನು ತೆರೆದು, ರಾಗಿ ಬೆಳೆದಿರುವ ರೈತರಿಂದ ನಿಯಮಾನುಸಾರ ಅಗತ್ಯ ದಾಖಲೆಗಳನ್ನು ಪಡೆದು ನೊಂದಾಯಿಸಿಕೊಳ್ಳಲಾಗಿದೆ.
ರಾಗಿ ಖರೀದಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಖರೀದಿ ಏಜೆನ್ಸಿಯಾದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಖರೀದಿ ಅಧಿಕಾರಿಗಳಾದ ನೆಲಮಂಗಲ ತಾಲ್ಲೂಕು ಖರೀದಿ ಅಧಿಕಾರಿ ವೈ.ಎಸ್ ನಾರಾಯಣಮೂರ್ತಿ (9482991630), ದೊಡ್ಡಬಳ್ಳಾಪುರ ತಾಲ್ಲೂಕು ಖರೀದಿ ಅಧಿಕಾರಿ ಹೆಚ್.ಎನ್ ನಾರಾಯಣ್(9886141435), ದೇವನಹಳ್ಳಿ ತಾಲ್ಲೂಕು ಖರೀದಿ ಅಧಿಕಾರಿ ಎಂ.ಅಚ್ಯೂತ್(9900136687), ಹೊಸಕೋಟೆ ತಾಲ್ಲೂಕು ಖರೀದಿ ಅಧಿಕಾರಿ ಲಕ್ಷ್ಮೀ ನಾರಾಯಣ (9880700975) ಇವರನ್ನು ಸಂಪರ್ಗಿಸಬಹುದಾಗಿದೆ ಎಂದು ತಿಳಿಸಿದ್ದಾರೆ.