--Ads--

ಫ್ಯಾಷನ್ ಹೆಸರಿನಲ್ಲಿ ದುಶ್ಚಟಗಳಿಗೆ ಬಲಿಯಾಗದಿರಿ:ಮಂಜಯ್ಯ

On: March 21, 2025 1:25 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಫ್ಯಾಷನ್ ಹೆಸರಿನಲ್ಲಿ ದುಶ್ಚಟಗಳಿಗೆ ಬಲಿಯಾಗದಿರಿ:ಮಂಜಯ್ಯ

ದೇವನಹಳ್ಳಿ , ಬೆಂಗಳೂರು ಗ್ರಾಮಾಂತರ ಜಿಲ್ಲೆ .ಮಾರ್ಚ್20: ಮಾದಕ ವಸ್ತುಗಳ ವ್ಯಸನ ಮಾನಸಿಕ ಹಾಗೂ ದೈಹಿಕ ಕಾಯಿಲೆಯಾಗಿದ್ದು, ಮಾದಕ ವಸ್ತುಗಳ ಸೇವನೆಗೆ ಒಳಗಾದರೆ ಅದರಿಂದ ಹೊರಬರುವುದು ಕಷ್ಟ. ಇದು ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಇದರ ವಿರುದ್ಧ ಯುವಜನರಲ್ಲಿ ಅರಿವು ಮೂಡಿಸುವುದು ಅಗತ್ಯವಿದೆ ಎಂದು ದೇವನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಮಂಜಯ್ಯ ಅವರು ತಿಳಿಸಿದರು.

ದೇವನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಮಧ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಆಯೋಜಿಸಿದ್ದ ಮದ್ಯ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಜಾಥಾ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ಮೇಲೆ ಮಾನಸಿಕವಾಗಿ, ದೈಹಿಕವಾಗಿ ದುಷ್ಪರಿಣಾಮಗಳು ಉಂಟಾಗುತ್ತವೆ. ಮದ್ಯ, ತಂಬಾಕು, ಬೀಡಿ, ಸಿಗರೇಟ್, ಗುಟ್ಕಾ, ಗಾಂಜಾ, ಅಫೀಮು, ನೋವು ನಿವಾರಕ ಹಾಗೂ ನಿದ್ರಾಜನಕ ಮಾತ್ರೆಗಳು ಮಾದಕ ವಸ್ತುಗಳಾಗಿವೆ. ಇವುಗಳ ಸೇವನೆಯಿಂದ ಮೆದುಳಿನಲ್ಲಿ ಅಸ್ಪಷ್ಟತೆ ಉಂಟಾಗುತ್ತದೆ. ತನ್ನ ಮೇಲೆ ನಿಯಂತ್ರಣ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಯುವಕರು ಇಂಥ ಚಟಗಳಿಂದ ದೂರವಿರಬೇಕು ಎಂದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕ್ಷೇತ್ರ ಅರೋಗ್ಯ ರಕ್ಷಣಾಧಿಕಾರಿ ಜಯಲಕ್ಷ್ಮಿ ಅವರು ಮಾತನಾಡಿ ಮದ್ಯಪಾನ, ಧೂಮಪಾನದಂತಹ ದುಶ್ಚಟಗಳಿಗೆ ಹದಿಹರೆಯದ ವಯಸ್ಸಿನವರು ಒಳಗಾಗುತ್ತಾರೆ. ಯುವಜನತೆಯು ಸಂತೋಷ, ಗೆಳೆಯರ ಒತ್ತಡ, ನೋವು ನಿವಾರಣೆ ನೆಪ, ಆಧುನಿಕ ಜೀವನ ಶೈಲಿ ಅನುಕರುಣೆ ಮಾಡಲು ವ್ಯಸನಕ್ಕೆ ತುತ್ತಾಗುತ್ತಾರೆ. ಇದರಿಂದ ,ಉದ್ಯೋಗದಲ್ಲಿ ತೊಂದರೆ, ಕೌಟುಂಬಿಕ ಸಮಸ್ಯೆಗಳು, ಆತ್ಮಹತ್ಯೆ, ಕಾನೂನು ಬಾಹಿರ ಕೃತ್ಯಗಳು, ದೈಹಿಕ, ಮಾನಸಿಕ ಕಾಯಿಲೆಗಳು, ರಸ್ತೆ ಅಪಘಾತಗಳು ಸಂಭವಿಸುತ್ತವೆ. ಹೀಗಾಗಿ ಯುವಕರು ಇಂಥ ದುಶ್ಚಟಗಳಿಂದ ದೂರವಿರಬೇಕು ಎಂದರು.

ಕಾರ್ಯಕ್ರಮಕ್ಕೂ ಮುನ್ನ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತ ಅರಿವು ಜಾಥಾ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಅಶೋಕ ಕುಮಾರ್ ಡಿ, ದೈಹಿಕ ಶಿಕ್ಷಕರಾದ ರವಿ ಸೇರಿದಂತೆ ಅಧಿಕಾರಿಗಳು ಮತ್ತು ಕಾಲೇಜು ಉಪನ್ಯಾಸಕರು ಹಾಗೂ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now