--Ads--

ಸಂಸದ ಡಾ.ಕೆ ಸುಧಾಕರ್ ಅವರಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

On: April 12, 2025 5:57 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಸಂಸದ ಡಾ.ಕೆ ಸುಧಾಕರ್ ಅವರಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಏ.11:ದೇವನಹಳ್ಳಿ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ 40.50 ಲಕ್ಷ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸಂಸದ ಡಾ.ಕೆ ಸುಧಾಕರ್ ಅವರು ಇಂದು ಗುದ್ದಲಿಪೂಜೆ ನೆರವೇರಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೂದಿಗೆರೆ ಗ್ರಾಮ ಪಂಚಾಯಿತಿಯ ಬೂದಿಗೆರೆ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆವರಣದಲ್ಲಿ ನೂತನ ಮಾದರಿ ಕೊಠಡಿ ನಿರ್ಮಾಣ ಕಾಮಗಾರಿ, ಬಿಜ್ಜವಾರ ಗ್ರಾಮ ಪಂಚಾಯಿತಿಯ ಹೊಲೇರಹಳ್ಳಿ ಬಸ್ ತಂಗುದಾಣ ನಿರ್ಮಾಣ ಕಾಮಗಾರಿ, ಗೊಡ್ಲು ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿಯ ವೆಂಕಟೇನಹಳ್ಳಿಯಲ್ಲಿ ಆರ್.ಸಿ.ಸಿ ಕಟ್ಟಡ ದೊಂದಿಗೆ ಶುದ್ಧ ಕುಡಿಯುವ ನೀರಿನ ಘಟಕದ ನಿರ್ಮಾಣ ಕಾಮಗಾರಿ, ಹಾರೋಹಳ್ಳಿ ಗ್ರಾಮ ಪಂಚಾಯಿತಿಯ ಚಿಕ್ಕನಹಳ್ಳಿ ಗ್ರಾಮದಲ್ಲಿ ಹೈ ಮಾಸ್ಟ್ ವಿದ್ಯುತ್ ದೀಪ ಅಳವಡಿಕೆ ಕಾಮಗಾರಿ, ಹಾರೋಹಳ್ಳಿ ಗ್ರಾಮದ ಬಸ್ ನಿಲ್ದಾಣದ ಹತ್ತಿರ ಹೈ ಮಾಸ್ಟ್ ವಿದ್ಯುತ್ ದೀಪದ ಅಳವಡಿಕೆ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ  ಆಯಾ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು,  ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

@@@@@@@@@@@@@@@@@@@@@

ಮೊಬೈಲ್‌ ರಿಪೇರಿ ಮತ್ತು ಸೇವೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್‌ ರಿಪೇರಿ & ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಏಪ್ರಿಲ್‌ 17 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9740982585, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

WhatsApp

Join Now

Telegram

Join Now

Instagram

Join Now