--Ads--

ರಥಯಾತ್ರೆಯಿಂದ ಸಾಹಿತ್ಯದ ಪರಿಚಯ, ಬಸವಣ್ಣನವರ ವಿಚಾರಗಳು ಪ್ರಸಾರವಾಗಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

On: April 17, 2025 5:01 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಅನುಭವ ಮಂಟಪ- ಬಸವಾದಿ ಶರಣರ ವೈಭವ’ ರಥಯಾತ್ರೆಗೆ ಚಾಲನೆ : ಲಾಂಛನ ಬಿಡುಗಡೆ

ರಥಯಾತ್ರೆಯಿಂದ ಸಾಹಿತ್ಯದ ಪರಿಚಯ, ಬಸವಣ್ಣನವರ ವಿಚಾರಗಳು ಪ್ರಸಾರವಾಗಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು , ಏಪ್ರಿಲ್ 17: ‘ಅನುಭವ ಮಂಟಪ- ಬಸವಾದಿ ಶರಣರ ವೈಭವ’ ರಥಯಾತ್ರೆಯು ಇಡೀ ರಾಜ್ಯದಲ್ಲಿ ಪ್ರಯಾಣ ಮಾಡಲಿದೆ. ಇದರಿಂದ ವಚನ ಸಾಹಿತ್ಯದ ಪರಿಚಯ, ಬಸವಣ್ಣನವರ ವಿಚಾರಗಳು ಪ್ರಚಾರವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಧಾನಸೌಧದಲ್ಲಿ ಇಂದು ಆಯೋಜಿಸಲಾಗಿದ್ದ ‘ಅನುಭವ ಮಂಟಪ- ಬಸವಾದಿ ಶರಣರ ವೈಭವ’ ಕಾರ್ಯಕ್ರಮದ ಲಾಂಛನ ಬಿಡುಗಡೆ ಮತ್ತು ರಥಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಿ ಅವರು ಮಾತನಾಡುತ್ತಾ ಬಸವಣ್ಣನವರು ಸಮಾಜಕ್ಕಾಗಿ ಬದುಕಿದವರು. ಸಮಾಜದ ಬದಲಾವಣೆಗಾಗಿ ಬದುಕಿರುವವರೆಗೂ ಪ್ರಯತ್ನಿಸಿದರು. ಬಸವಣ್ಣನವರ ಅನುಭವ ಮಂಟಪ ಪರಿಕಲ್ಪನೆಯ ಮೂಲಕ 12 ನೇ ಶತಮಾನದಲ್ಲಿಯೇ ಪ್ರಜಾಪ್ರಭುತ್ವದ ಸ್ಥಾಪನೆಯಾಗಿತು. ಇಲ್ಲಿ ಚರ್ಚೆ ಮತ್ತು ಅದಕ್ಕೆ ಪರಿಹಾರವನ್ನು ಕಂಡುಹಿಡಿದು ಅದನ್ನು ಜಾರಿ ಮಾಡುತ್ತಿದ್ದರು. ಜಗತ್ತಿನ ಮೊದಲನೇ ಸಂಸತ್ತು ಇದಾಗಿತ್ತು. ಎಲ್ಲಾ ಧರ್ಮ, ಜಾತಿಯವರಿಗೆ ಭಾಗವಹಿಸಲು ಅವಕಾಶವನ್ನು ಕಲ್ಪಿಸಲಾಗಿತ್ತಲ್ಲದೇ ಅವರ ಅಭಿಪ್ರಾಯವನ್ನು ಮುಕ್ತವಾಗಿ ವ್ಯಕ್ತಪಡಿಸಬಹುದಾಗಿತ್ತು ಎಂದರು.

ಕಳೆದ ಬಾರಿ ನಮ್ಮ ಸರ್ಕಾರದ ಅವಧಿಯಲ್ಲಿ ಬಸವ ಕಲ್ಯಾಣದ ಪುನರುತ್ಥಾನ ಮಾಡಲು ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು. ಪುನರುತ್ಥಾನದ ಕೆಲಸವನ್ನು ಈ ಬಾರಿ ಪೂರೈಸಲಾಗುವುದು ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಭರವಸೆ ನೀಡಿದರು.

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಒಪ್ಪಿಕೊಂಡು ಘೋಷಣೆ ಮಾಡಿದೆ.ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ನಮ್ಮ ಸರ್ಕಾರ ಘೋಷಣೆಯನ್ನು ಮಾಡಿದೆ. ಕೇವಲ ಘೋಷಣೆ ಮಾಡಿಲ್ಲ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಒಪ್ಪಿಕೊಂಡು ಜಾರಿ ಮಾಡಿದೆ. ಬಸವಣ್ಣ ಸಾಮಾಜಿಕ ಕ್ರಾಂತಿ ಮಾಡಿದವರು. ಸಮಾಜದಲ್ಲಿನ ಸಾಮಾಜಿಕ ರೋಗಗಳಿಗೆ ಪರಿಹಾರವನ್ನು ಸೂಚಿಸಿದ್ದು ಮಾತ್ರವಲ್ಲದೇ ನುಡಿದಂತೆ ನಡೆಯುವ ಹಾಗೂ ನಡೆದಂತೆ ನುಡಿಯುವ ಪ್ರಯತ್ನವನ್ನು ಮಾಡಿದರು ಎಂದರು.

ಈ ಸಂದರ್ಭದಲ್ಲಿ ಸಚಿವ ಹೆಚ್ ಕೆ ಪಾಟೀಲ್, ಎಂ ಬಿ ಪಾಟೀಲ್, ಶಿವರಾಜ್ ತಂಡಡಗಿ, ಕೆಜೆ ಜಾರ್ಜ್ ಮಾಜಿ ಸಚಿವೆ ಬಿ ಟಿ ಲಲಿತ ನಾಯಕ್ ಸಚಿವರು ಶಾಸಕರು ಮುಖಂಡರುಗಳು ಹಾಜರಿದ್ದರು.

WhatsApp

Join Now

Telegram

Join Now

Instagram

Join Now