--Ads--

ಬಿ.ಆರ್.ಅಂಬೇಡ್ಕ‌ರ್ ನೀಡಿರುವ ಹಕ್ಕುಗಳನ್ನು ಪಾಲಿಸಲು ಮರೆತಿದ್ದೇವೆ : ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ

On: April 17, 2025 5:29 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಬಿ.ಆರ್. ಅಂಬೇಡ್ಕರ್ ನೀಡಿರುವ ಹಕ್ಕುಗಳನ್ನು ಪಾಲಿಸಲು ಮರೆತಿದ್ದೇವೆ : ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ

ಶಿಡ್ಲಘಟ್ಟ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕ‌ರ್ ಅವರು ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳನ್ನು ನೀಡಿದ್ದಾರೆ ನಮ್ಮ ರಕ್ಷಣೆಗೆ ಕಾನೂನು ನೀಡಿದ್ದಾರೆ ಇವೆಲ್ಲವನ್ನು ಅರಿತುಕೊಳ್ಳಬೇಕಿದ್ದು ನಾವು ಪಾಲಿಸಬೇಕಾದ ಮೂಲಭೂತ ಕರ್ತವ್ಯಗಳನ್ನು ಮರೆತಿದ್ದೇವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ತಿಳಿಸಿದರು.

ಶಿಡ್ಲಘಟ್ಟ ನಗರದ ನ್ಯಾಯಾಲಯದಲ್ಲಿ ತಾಲ್ಲೂಕು ವಕೀಲರ ಸಂಘದಿಂದ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕ‌ರ್ ಜಯಂತಿಯಲ್ಲಿ  ಅವರು ಮಾತನಾಡಿದರು.

ಅಂಬೇಡ್ಕರ್ ಅವರ ಜಯಂತಿಯಂದು ಮಾತ್ರ ನಾವು ಸ್ಮರಿಸದೆ ದಿನನಿತ್ಯ ಅವರನ್ನು ಸ್ಮರಿಸುವಂತಾಗಬೇಕು ಹಾಗು ತತ್ವ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರು ಪಾಲಿಸಬೇಕು ಎಂದು ಹೇಳಿದರು.

ನಾಗರಿಕರಾಗಿ ಪ್ರಾಮಾಣಿಕವಾಗಿ ಕಾನೂನುಗಳನ್ನು ಅರಿತು ಗೌರವಿಸಬೇಕು ಸಂವಿಧಾನ ಆಶಯಗಳು ಹಾಗೂ ಸಾರ್ವಭೌಮತ್ವಕ್ಕೆ ಧಕ್ಕೆಯಾಗದಂತೆ ನಡೆದುಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶೆ ಜೆ.ಪೂಜಾ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಎಸ್.ರಂಜಿತ, ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ಎ.ನಾರಾಯಣಸ್ವಾಮಿ, ಕಾರ್ಯದರ್ಶಿ ಸಿ.ಜಿ.ಭಾಸ್ಕ‌ರ್, ಹಿರಿಯ ವಕೀಲ ಎಂ.ಪಾಪಿರೆಡ್ಡಿ, ವಿಜಯಲಕ್ಷ್ಮಿ ವಿದ್ಯಾವಸ್ತ್ರದ್ ಹಾಗು ವಕೀಲರ ಸಂಘದ ಪದಾಧಿಕಾರಿಗಳು ಹಾಜರಿದ್ದರು.

WhatsApp

Join Now

Telegram

Join Now

Instagram

Join Now