--Ads--

ವರನಟ ಡಾ.ರಾಜಕುಮಾರ್ ಅವರ ಜಯಂತಿ ಆಚರಣೆ

On: April 24, 2025 5:23 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

 ವರನಟ ಡಾ.ರಾಜಕುಮಾರ್ ಅವರ ಜಯಂತಿ ಆಚರಣೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಏಪ್ರಿಲ್ 24 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ‘ವರನಟ ಡಾ.ರಾಜಕುಮಾರ್’ ಅವರ 97 ನೇ ಜನ್ಮ ದಿನಾಚರಣೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರು ವರನಟ ಡಾ.ರಾಜ್ ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ರಾಜ್ ಕುಮಾರ್ ಅವರ ಗೀತ ಗಾಯನ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಶಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಅಶೋಕ್ ಕುಮಾರ್ ಡಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ನರೇಂದ್ರ ಬಾಬು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

 

WhatsApp

Join Now

Telegram

Join Now

Instagram

Join Now