ತೂಬಗೆರೆ ಹೋಬಳಿಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಸರ್ಗ ನಾರಾಯಣಸ್ವಾಮಿ ಮತಯಾಚನೆ.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್ ನಿಸರ್ಗ ನಾರಾಯಣಸ್ವಾಮಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತೂಬಗೆರೆ ಗ್ರಾಮ ಪಂಚಾಯಿತಿಯ ವಿವಿಧ ಗ್ರಾಮಗಳಲ್ಲಿ ಮತಯಾಚನೆ ಮಾಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯಲ್ಲಿನ ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಮತ ಪ್ರಚಾರವನ್ನು ಆರಂಭಿಸಿದರು.
ಈ ವೇಳೆಯಲ್ಲಿ ಮಾತನಾಡಿದ ಅವರು ರಾಜಕೀಯ ಮೇಲಾಟದಲ್ಲಿ ಮತ ಪರಿವರ್ತನೆಗಾಗಿ ಸುಳ್ಳು ಹೇಳುವುದನ್ನು ಕೆ ಹೆಚ್ ಮುನಿಯಪ್ಪ ಅವರು ಹಿಂದಿನಿಂದಲೂ ಮಾಡಿಕೊಂಡು ಬಂದಿದ್ದಾರೆ.
ತೂಬಗೆರೆ ಹೋಬಳಿಯಲ್ಲಿ ಎಷ್ಟು ಹಳ್ಳಿಗಳಿವೆ ಎಂಬುದೇ ಅವರಿಗೆ ತಿಳಿದಿಲ್ಲ ಎಂದು ಟೀಕಿಸಿದರು.
ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಯೇ ಆಗಿಲ್ಲ ಎನ್ನುವ ಹೇಳಿಕೆ ನೀಡುವ ಕೆಎಚ್ ಮುನಿಯಪ್ಪ ಅವರು ಇಡೀ ಕ್ಷೇತ್ರವನ್ನು ಒಮ್ಮೆ ಸುತ್ತಾಡಿಕೊಂಡು ನೋಡಿ ಬರಲಿ ಐದು ವರ್ಷಗಳಲ್ಲಿ ನಡೆದಿರುವ ಕಾಮಗಾರಿಗಳ ಪರಿಚಯವಾಗಲಿದೆ. ಮತದಾರರನ್ನು ಮೆಚ್ಚಿಸಲು ವಿನಾಕಾರಣ ಹೇಳಿಕೆಗಳನ್ನು ನೀಡಬಾರದು. ಬಿಜೆಪಿ ಕಾಂಗ್ರೆಸ್ ಡಬಲ್ ಗೇಮ್ ಪಕ್ಷಗಳು ನಾನು ಕ್ಷೇತ್ರದಲ್ಲಿ ಕೆಲಸ ಮಾಡಿ ಮತ ಕೇಳುತ್ತಿದ್ದೇನೆ. ತೆನೆ ಹೊತ್ತ ಮಹಿಳೆಗೆ ಮತ ನೀಡಿ ಆಶೀರ್ವಾದ ಮಾಡಬೇಕೆಂದು ಮನವಿ ಮಾಡಿದರು.