--Ads--

ಕೆಣಕಿದರೆ ಸುಮ್ಮನಿರೋಲ್ಲ – ಪಾಕಿಸ್ತಾನಕ್ಕೆ ಎಚ್ಚರಿಸಿದ ಸಿ.ಎಂ.ಸಿದ್ದರಾಮಯ್ಯ

On: April 29, 2025 3:41 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಕೆಣಕಿದರೆ ಸುಮ್ಮನಿರೋಲ್ಲ – ಪಾಕಿಸ್ತಾನಕ್ಕೆ ಎಚ್ಚರಿಸಿದ ಸಿ.ಎಂ.ಸಿದ್ದರಾಮಯ್ಯ

ದೇವನಹಳ್ಳಿ ಸಾಧನೆ ಸಮಾವೇಶದಲ್ಲಿ ಸಿ.ಎಂ.ಗುಡುಗು

1 ಸಾವಿರ ಕೋಟಿ ರೂ ಕಾಮಗಾರಿಗಳ ಶಂಕುಸ್ಥಾಪನೆ, ಉಧ್ಘಾಟನೆ

ಬಿಜಿಎಸ್ ನಗರ ದೇವನಹಳ್ಳಿ ಬೆಂಗಳೂರು ಗ್ರಾ, ಏಪ್ರಿಲ್  ದೇವನಹಳ್ಳಿ ಶಾಂತಿ ಭೋಧಿಸಿದ ಬುದ್ದ, ಬಸವರ ನಾಡು ನಮ್ಮದು.ಭಾರತವನ್ನು ಕೆಣಕಿದರೆ ಅದು ಪಾಕಿಸ್ತಾನವೇ ಆಗಲಿ, ಯಾವುದೇ ದೇಶವಾಗಲಿ ನಾವು ಸಹಿಸಲ್ಲ.‌ ಯಾವುದೇ ಹಂತದ ಯುದ್ಧಕ್ಕೆ ಭಾರತ ಸದಾ ಸಿದ್ಧ, ಸದಾ ಸನ್ನದ್ಧ ಆಗಿರುತ್ತದೆ. ಅನಿವಾರ್ಯತೆ ಆದಾಗ ಯುದ್ಧಕ್ಕೆ ಮುಂದಡಿ ಇಟ್ಟು ನಮ್ಮ ಸಾರ್ವಭೌಮತೆಯನ್ನು ಕಾಪಾಡಿಕೊಳ್ಳುವುದು ನಮಗೆ ಗೊತ್ತಿದೆ. ಇದನ್ನು ಭಾರತ ಪ್ರತೀ ಸಂದರ್ಭದಲ್ಲೂ ಸಾಬೀತು ಪಡಿಸಿದೆ. ಇತಿಹಾಸದುದ್ದಕ್ಕೂ ನಾವು ಈ ಎಚ್ಚರವನ್ನು ಮತ್ತು ಸಾರ್ವಭೌಮತೆಯನ್ನು ಕಾಪಾಡಿಕೊಂಡೇ ಬಂದಿದ್ದೇವೆ. ಮುಂದಕ್ಕೂ ಇದನ್ನು ಕಾಪಾಡಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು

ದೇವನಹಳ್ಳಿ ತಾಲೂಕು ಭೈರದೇನಹಳ್ಳಿಯಲ್ಲಿ ಕೈಗಾರಿಕಾ ಪ್ರದೇಶದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾಪಂಚಾತ್ ವತಿಯಿಂದ ನಡೆದ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಮಾತನಾಡಿದರು.

ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತು ಹಾಕುವುದು, ಪ್ರತಿಯೊಬ್ಬ ಭಾರತೀಯರಿಗೆ ಸೂಕ್ತ ರಕ್ಷಣೆ ಕೊಡುವುದು ನಮ್ಮ ಈ ಕ್ಷಣದ ಆದ್ಯತೆಯಾಗಿದೆ. ಇದರಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ.

ಭಾರತ ಬುದ್ಧ, ಬಸವಣ್ಣ, ಗಾಂಧಿ, ಅಂಬೇಡ್ಕರ್ ಅವರ ನಾಡು. ಇಲ್ಲಿ ಭಯೋತ್ಪಾದನೆಗೆ, ಅಶಾಂತಿಗೆ ಅವಕಾಶ ಇಲ್ಲ. ಅನಿವಾರ್ಯವಾದರೆ ಯುದ್ಧಕ್ಕೂ ಸಿದ್ಧ ಎನ್ನುವ ಮಾತನ್ನು ನಿನ್ನೆ ನಾನು ಹೇಳಿದ್ದೆ. ಆದರೆ ಭಯೋತ್ಪಾದಕರ ವಿರುದ್ಧ, ಪಾಕಿಸ್ತಾನದ ವಿರುದ್ಧ ಯುದ್ಧವೇ ಬೇಡ ಎಂದು ಹೇಳಿದ್ದೇನೆ ಎಂದು ಸುಳ್ಳು ಸುಳ್ಳೇ ಬಿಜೆಪಿ ಪ್ರಚಾರ ಮಾಡುತ್ತಿದೆ. ನನ್ನ ಮಾತನ್ನು ತಿರುಚಿ ಯುದ್ಧವೇ ಬೇಡ ಎಂದು ಹೇಳಿದ್ದೇನೆ ಎಂದು ನನ್ನದಲ್ಲದ ಅಭಿಪ್ರಾಯವನ್ನು ತೋರಿಸುತ್ತಿದ್ದಾರೆ. ಇದು ತಪ್ಪು, ಇದಕ್ಕೆ ನಾನು ಹೊಣೆಗಾರನಲ್ಲ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಾವಿರಾರು ಕೋಟಿ ವೆಚ್ಚದ ಕಾಮಗಾರಿಗಳಿಗೆ ಒಂದೇ ದಿನ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಬಿಜೆಪಿ ಪರಿವಾರದ ಸುಳ್ಳುಗಳಿಗೆ ಅಭಿವೃದ್ಧಿ ಮೂಲಕವೇ ಉತ್ತರ ನೀಡುತ್ತಿದ್ದೇವೆ.

ಬಿಜೆಪಿ ಕನ್ನಡಕದ ಗಾಜುಗಳು ಅವರ ಅಧಿಕಾರಾವಧಿಯ ಕಲೆಗಳಿಂದ ಕೂಡಿದೆ. ಅದಕ್ಕೇ ಅವರು ನೋಡುವ ಕಡೆಯಲ್ಲೆಲ್ಲಾ ಕಲೆಗಳೇ ಕಾಣುತ್ತಿವೆ. ಬಿಜೆಪಿ ತನ್ನ ಕನ್ನಡಕ ಕ್ಲೀನ್ ಮಾಡಿಕೊಂಡರೆ ನಮ್ಮ ಸರ್ಕಾರದ ಅಭಿವೃದ್ಧಿ ಕಾಣುತ್ತದೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಅಭಿವೃದ್ಧಿ ಮತ್ತು ಪ್ರಗತಿಗೆ ನಮ್ಮ ಸರ್ಕಾರ ನಿರಂತರವಾಗಿ ಅನುದಾನಗಳನ್ನು ನೀಡಿ, ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುತ್ತಿದೆ. ಚುನಾವಣೆ ವೇಳೆ ನಾವು ಕೊಟ್ಟ ಭರವಸೆಗಳನ್ನೆಲ್ಲಾ ಈಡೇರಿಸುತ್ತಲೇ ಇದ್ದೇವೆ. ಅಧಿಕಾರಕ್ಕೆ ಬಂದ ಬಳಿಕ ಮೊದಲ ಕ್ಯಾಬಿನೆಟ್ ನಲ್ಲೇಃ ಗ್ಯಾರಂಟಿಗಳನ್ನು ಜಾರಿ ಮಾಡಿ ಇದಕ್ಕಾಗಿ 80 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಿದ್ದೇವೆ ಎಂದರು

WhatsApp

Join Now

Telegram

Join Now

Instagram

Join Now