ಜಿಲ್ಲಾಡಳಿತ ಭವನದಲ್ಲಿ ಜಗಜ್ಯೋತಿ ಬಸವಣ್ಣನವರ ಜಯಂತಿ ಆಚರಣೆ
ವಿಜಯ ದರ್ಪಣ ನ್ಯೂಸ್….
ಜಿಲ್ಲಾಡಳಿತ ಭವನದಲ್ಲಿ ಜಗಜ್ಯೋತಿ ಬಸವಣ್ಣನವರ ಜಯಂತಿ ಆಚರಣೆ
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಏಪ್ರಿಲ್ 30 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಶ್ವ ಗುರು *ಜಗಜ್ಯೋತಿ ಬಸವಣ್ಣನವರ ಜಯಂತಿ* ಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ವಿಕಲಚೇತನರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಗದೀಶ್, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
**************************************
ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಏಪ್ರಿಲ್: ಕೃಷಿ ಇಲಾಖೆ ವತಿಯಿಂದ ಕೇಂದ್ರ ಪುರಸ್ಕೃತ ಆತ್ಮ ಯೋಜನೆಯಡಿ ಹೊಸಕೋಟೆ ತಾಲ್ಲೂಕಿನ ಜಡಿಗೇನಹಳ್ಳಿ ಮತ್ತು ಅನುಗೊಂಡನಹಳ್ಳಿಯ ರೈತ ಸಂಪರ್ಕ ಕೇಂದ್ರದಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎಸ್ಸಿ ಅಥವಾ ಸಂಬಂಧಿಸಿದ ವಿಷಯಗಳಲ್ಲಿ (Allied subject) ಪದವಿ ಮಾಡಿರಬೇಕು. ಕೃಷಿ ಸಂಬಂಧಿಸಿದ ವಿಭಾಗದಲ್ಲಿ ಕನಿಷ್ಠ ಒಂದು ವರ್ಷ ಕರ್ತವ್ಯ ನಿರ್ವಹಿಸಿರುವ ಅನುಭವ ಹೊಂದಿರುವ ಸ್ವ-ವಿವರಗಳ ಜೊತೆಗೆ ಬೇಕಾದ ಪೂರಕ ದಾಖಲೆಗಳನ್ನು ಮೇ 15 ರ ಒಳಗೆ ಕಚೇರಿಯ ಅವಧಿಯೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ 208/209, ಕಚೇರಿಯ ದೂರವಾಣಿ ಸಂಖ್ಯೆ 080-26711594. ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಪರ್ಕಿಸಬಹುದಾಗಿದೆ.