ತಾಂಡವಪುರ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಬಸವಣ್ಣನವರ ಜಯಂತಿ ಆಚರಣೆ

ವಿಜಯ ದರ್ಪಣ ನ್ಯೂಸ್….

ತಾಂಡವಪುರ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಬಸವಣ್ಣನವರ ಜಯಂತಿ ಆಚರಣೆ

ತಾಂಡವಪುರ: ಏಪ್ರಿಲ್ 30 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮಪಂಚಾಯ್ತಿ ಕಚೇರಿಯಲ್ಲಿ ಕ್ರಾಂತಿಕಾರಿ ಬಸವಣ್ಣನವರ ಜಯಂತಿ ಮಹೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.

ಪಂಚಾಯಿತಿ ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರವನ್ನು ಇರಿಸಿ ಗ್ರಾಮ ಪಂಚಾಯತಿಯ ಅಧ್ಯಕ್ಷ ನಾಗಮ್ಮ ಪಿಡಿಒ ಪ್ರಕಾಶ್ ಲೆಕ್ಕ ಸಹಾಯಕ ಪುಟ್ಟರಾಜು ಕಾರ್ಯದರ್ಶಿ ಕೆಕೆ ಮುರಯ್ಯ ಗ್ರಾಮ ಪಂಚಾಯತ್ ಸದಸ್ಯ ಶ್ರೀಕಂಠ ಸ್ವಾಮಿ ಹಾಗೂ ಪೌರಕಾರ್ಮಿಕರು ಪಂಚಾಯಿತಿ ಸಿಬ್ಬಂದಿ ವರ್ಗದವರು ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ನಮಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ನಾಗಮ್ಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಲೆಕ್ಕ ಸಹಾಯಕ ಪುಟ್ಟರಾಜು ಕಾರ್ಯದರ್ಶಿ ಕೆಕೆ ಮಾರಯ್ಯ ಗ್ರಾಮ ಪಂಚಾಯತ್ ಸದಸ್ಯ  ಶ್ರೀಕಂಠಸ್ವಾಮಿ ಹಾಗೂ ಪಂಚಾಯತಿಯ ಪೌರಕಾರ್ಮಿಕರು ಸಿಬ್ಬಂದಿ ವರ್ಗದವರು ಹಾಜರಿದ್ದರು