ಜಿಲ್ಲಾಡಳಿತ ಭವನದಲ್ಲಿ ಶ್ರೀ ಶಂಕರಾಚಾರ್ಯ ಜಯಂತಿ ಆಚರಣೆ

ವಿಜಯ ದರ್ಪಣ ನ್ಯೂಸ್….

ಜಿಲ್ಲಾಡಳಿತ ಭವನದಲ್ಲಿ ಶ್ರೀ ಶಂಕರಾಚಾರ್ಯ ಜಯಂತಿ ಆಚರಣೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ ಮೇ 2 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆದಿ ಶಂಕರ ‘ಶ್ರೀ ಶಂಕರಾಚಾರ್ಯ’ ಜಯಂತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಶ್ರೀ ಶಂಕರಾಚಾರ್ಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು.

ನಂತರ ಮಾತನಾಡಿ ಆದಿ ಶಂಕರ ಎಂದೇ ಪ್ರಸಿದ್ದಿ ಪಡೆದಿರುವ ಶಂಕರಾಚಾರ್ಯರು ಅದ್ವೈತ ವೇದಾಂತಕ್ಕೆ ಅಡಿಪಾಯ ಹಾಕಿ ಹಿಂದೂ ಧರ್ಮವನ್ನು ಪುನರುಜ್ಜೀವನಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದರು. ಅಂತಿಮ ಗುರಿಯನ್ನು ತಿಳಿಸಿಕೊಡುವುದೇ ವೇದಾಂತ ಎಂದು ಶಂಕರಾಚಾರ್ಯರು ವೇದಾಂತಕ್ಕೆ ಸ್ಪಷ್ಟತೆಯನ್ನು ತಂದುಕೊಟ್ಟರು. ಸಮಾನತೆಯ ದರ್ಶನವೇ ಅದ್ವೈತ ದರ್ಶನ ಎಂಬ ಮಾತನ್ನು ಲೋಕದಲ್ಲಿ ಸ್ಥಿರಗೊಳಿಸಿದವರು ಶಂಕರಾಚಾರ್ಯರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಶಾ, ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ರಾಜೀವ್ ಸುಲೋಚನಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಜಯಲಕ್ಷ್ಮಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನಿತ ಲಕ್ಷ್ಮೀ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.