ಮತ ಎಣಿಕೆ ಕಾರ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಲು ಜಿಲ್ಲಾಧಿಕಾರಿ ಆರ್.ಲತಾ ಸೂಚನೆ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ (ಕನಾ೯ಟಕ ವಾತೆ೯): 2023-ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧ ಮೇ 10 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ದೇವನಹಳ್ಳಿಯ ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ, ಮೇ 13 ರಂದು ನಡೆಯಲಿರುವ ಮತ ಎಣಿಕೆ ಕಾರ್ಯವನ್ನು ಜವಾಬ್ದಾರಿಯಿಂದ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಮತ ಎಣಿಕೆ ಸಿಬ್ಬಂದಿಗಳಿಗೆ ಸೂಚಿಸಿದರು.
ದೇವನಹಳ್ಳಿ ತಾಲ್ಲೂಕು, ಬೀರಸಂದ್ರ ಗ್ರಾಮದ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿಂದು ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಲಾದ ಸಿಬ್ಬಂದಿಗಳ ತರಬೇತಿ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸಿಬ್ಬಂದಿಗಳು ನಿಗದಿಪಡಿಸಿದ ಕೆಲಸಕ್ಕೆ ಸರಿಯಾದ ಸಮಯಕ್ಕೆ ಹಾಜರಾಗಿ, ಒತ್ತಡ ಹಾಗೂ ಗೊಂದಲಗಳಿಗೆ ಒಳಗಾಗದೆ ಮಾನಸಿಕ ಸಧೃಡವಾಗಿ, ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಲು ಸಿದ್ಧರಾಗಬೇಕೆಂದು ಸಲಹೆ ನೀಡಿದರು.
ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್, ನಾಲ್ಕು ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು, ತಹಶೀಲ್ದಾರ್‌ಗಳು ಹಾಗೂ ಮೈಕ್ರೊ ಅಬ್ಸರ್ವರ್‌ಗಳು, ಮತ ಎಣಿಕೆ ನಿಯೋಜಿತ ಸೂಪರ್ ವೈಸರ್‌ಗಳು, ಸಹಾಯಕ ಸೂಪರ್‌ವೈಸರ್‌ಗಳು, ಮತ ಎಣಿಕೆ ಸಿಬ್ಬಂದಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.