--Ads--

ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವ ಡೆಂಗ್ಯೂ ದಿನಾಚರಣೆ 

On: May 16, 2025 6:02 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವ ಡೆಂಗ್ಯೂ ದಿನಾಚರಣೆ

ಶಿಡ್ಲಘಟ್ಟ : ಡೆಂಗ್ಯೂ ಜ್ವರ ಸೊಳ್ಳೆಗಳ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ ಮುಂಗಾರು ಮಳೆ ಪ್ರಾರಂಭವಾಗಿದ್ದು, ಹಳ್ಳ ಕೊಳ್ಳಗಳಲ್ಲಿ ನೀರು ನಿಲ್ಲುತ್ತದೆ ಹೆಚ್ಚಾಗಿ ಸೊಳ್ಳೆಗಳು ನಿಂತ ನೀರಿನಲ್ಲಿ ಉತ್ಪತ್ತಿಯಾಗುತ್ತವೆ ಹೀಗಾಗಿ ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಿ ಎಂದು ತಹಸೀಲ್ದಾರ್ ಬಿ.ಎನ್.ಸ್ವಾಮಿತಿಳಿಸಿದರು.

ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಇಂದು ವಿಶ್ವ ಡೆಂಗ್ಯೂ ದಿನಾಚರಣೆಯ ಅಂಗವಾಗಿ ಡೆಂಗ್ಯೂ ಜಾಗೃತಿ ಮತ್ತು ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರೋಗ ಬರುವುದಕ್ಕೂ ಮುನ್ನ ನಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಚ ವಾಗಿಟ್ಟುಕೊಂಡರೆ ರೋಗ ಹರಡುವುದಿಲ್ಲ, ಹೀಗಾಗಿ ತಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು ಎಂದರು.

ತಾಲ್ಲೂಕು ಪಂಚಾಯತಿ ಇ.ಓ.ಹೇಮಾವತಿ ಮಾತನಾಡಿ
ಸಾರ್ವಜನಿಕರು ಡೆಂಗ್ಯೂ ಜ್ವರದ ಲಕ್ಷಣಗಳು ಕಂಡು ಬಂದರೆ ತಕ್ಷಣ ಹತ್ತಿರದ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು ಮುನ್ನಚ್ಚರಿಕಾ ಕ್ರಮಗಳನ್ನು ಅನುಸರಿಸಿ ರೋಗ ಹರಡದಂತೆ ನೋಡಿಕೊಳ್ಳಬೇಕು ಎಂದರು.

ತೀವ್ರ ಜ್ವರ, ಕಣ್ಣು ಹಿಂಭಾಗ ನೋವು, ತೀರ ಮೈ-ಕೈ ನೋವು ಡೆಂಗ್ಯೂ ರೋಗದ ಲಕ್ಷಣಗಳು ಈ ರೋಗ ಬರದಂತೆ ತಡೆದುಕೊಳ್ಳುವುದೇ ಮೂಲ ಉದ್ದೇಶವಾಗಿರುತ್ತದೆ ಎಂದರು.

ತಾಲ್ಲೂಕು ಆರೋಗ್ಯ ನೀರಿಕ್ಷಣಾಧಿಕಾರಿ ದೇವರಾಜ್ ಮಾತನಾಡಿ ಸೊಳ್ಳೆಗಳು ಉತ್ಪತ್ತಿ ಆಗದಂತೆ ನೋಡಿಕೊಳ್ಳುವುದು,ಮನೆ ಆವರಣದಲ್ಲಿ ನೀರು ನಿಲ್ಲದಂತೆ ಸ್ವಚ್ಛತಾ ಕಾಪಾಡಿಕೊಳ್ಳಬೇಕು ಹಾಗೂ ಈ ರೋಗದ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಎಂದ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಉಪನಿರ್ದೇಶಕ ಜಗದೀಶ್, ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಧಿಕಾರಿ ಡಾ.ಮನೋಹರ್, ಶುಶ್ರೂಷಾಧಿಕಾರಿ ನಬಿವುಲ್ಲಾ, ಆರೋಗ್ಯ ಇಲಾಖೆಯ ಸಿ.ವಿಜಯ,ಧನಂಜಯ್, ಸುನೀಲ್‌ ಕುಮಾರ್‌,ನಂದಿನಿ ಅಪೇಕ್ಷ,ಗೀತಾ, ಪ್ರನೋತಿ,ಹಾಹೀದಾ, ನರಸಿಂಹಮೂರ್ತಿ, ಜಾಹಿದಾ,ಚೈತ್ರ,ಕೀರ್ತಿ, ಅಫ್ರೋಜ್‌ ಸೇರಿದಂತೆ ಆಶಾ ಕಾರ್ಯಕರ್ತರು ಹಾಜರಿದ್ದರು.

################################

ಮಳೆಯಿಂದ ಆಗುವ ಹಾನಿಯನ್ನು ತಪ್ಪಿಸಲು ಸಹಾಯವಾಣಿ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು  ಗ್ರಾ.ಜಿಲ್ಲೆ.ಮೇ 16 : ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ಯಾವುದೇ ರೀತಿಯ ಜೀವಹಾನಿ ಆಗಬಾರದು ಹಾಗೂ ಜಾನುವಾರುಗಳನ್ನು ರಕ್ಷಿಸುವ ಸಲುವಾಗಿ ಸಹಾಯವಾಣಿ ತೆರೆಯಲಾಗಿದೆ.

ಈ ಬಾರಿ ಮುಂಗಾರು ಮಳೆಯು ಸಮಯಕ್ಕೆ ಮುಂಚಿತವಾಗಿ ಆರಂಭವಾಗಲಿದ್ದು ಮಳೆ, ಗಾಳಿ,ಸಿಡಿಲು, ಗುಡುಗು ಹಾಗೂ ಮಿಂಚಿನಿಂದ ಜನಸಾಮಾನ್ಯರು ತಪ್ಪಿಸಿಕೊಳ್ಳಲು ಕೆ.ಎಸ್.ಎನ್.ಡಿ.ಎಂ.ಸಿ (KSNDMC)ಯಲ್ಲಿ ಚಾಲ್ತಿಯಲ್ಲಿರುವ ವರುಣ ಮಿತ್ರ ಸಹಾಯವಾಣಿ ಸಂಖ್ಯೆ 9243345433 ಗೆ ಸಂಪರ್ಕಿಸುವ ಮೂಲಕ ಹವಾಮಾನ ಮಾಹಿತಿಯನ್ನು ಪಡೆಯಬಹುದು ಹಾಗೂ ಗುಡುಗು ಸಿಡಿಲಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೆ.ಎಸ್.ಎನ್.ಡಿ.ಎಂ.ಸಿ ಅವರು ಅಭಿವೃದ್ಧಿಪಡಿಸಿರುವ ಸಿಡಿಲು ಅಪ್ಲಿಕೇಶನ್ (Sidilu app), NDMA ಅವರ ದಾಮಿನಿ ಅಪ್ಲಿಕೇಶನ್ (Damini app) ಹಾಗೂ NDMA ಅವರು ನಿರ್ಮಿಸಿರುವ ಸಚೆಟ್ ಅಪ್ಲಿಕೇಶನ್ (Sachet app) ಅನ್ನು ಪ್ಲೇ ಸ್ಟೋರ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

ಮೇಲೆ ತಿಳಿಸಿದ ಅಪ್ಲಿಕೇಶನ್ ಗಳಲ್ಲಿ ಯಾವ ಪ್ರದೇಶದಲ್ಲಿ ಮಳೆ,ಗುಡುಗು ಮತ್ತು ಸಿಡಿಲು ಬರುವ ಸಾಧ್ಯತೆಯಿದೆ ಎಂಬುದನ್ನು 30 ನಿಮಿಷಗಳ ಮೊದಲೇ ತಿಳಿಸುತ್ತದೆ. ಆದ್ದರಿಂದ ಯಾವುದೇ ರೀತಿಯ ಅಪಾಯಗಳಿಂದ ಜನರು ಪಾರಾಗಬಹುದು, ಹಾಗೇ ಅದಕ್ಕೆ ಬೇಕಾದ ಸಲಹೆ ಮತ್ತು ಸೂಚನೆಗಳನ್ನು ನೀಡುವ ಮೂಲಕ ಈ ಅಪ್ಲಿಕೇಶನ್ ಗಳು ಕಾರ್ಯನಿರ್ವಹಿಸುತ್ತವೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಆಸ್ಪತ್ರೆಯ ಅವ್ಯವಸ್ಥೆ, ಸವಲತ್ತುಗಳು ಸಿಗದ ಬಗ್ಗೆ ಅಸಮಾಧಾನ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ 

ಭೂಮಾಪಕರಿಗೆ ಸಮಾನ ವೇತನ ನೀಡುವಂತೆ ಸದನದಲ್ಲಿ ಪ್ರಸ್ತಾಪಿಸಬೇಕೆಂದು ಭೂಮಾಪಕರ ಸಂಘದಿಂದ ಶಾಸಕ ಬಿ.ಎನ್.ರವಿಕುಮಾರ್‌ಗೆ ಮನವಿ

ಜಲಕ್ಷಾಮ ತಡೆಯಲು ಕಲ್ಯಾಣಿಗಳ ನೈರ್ಮಲ್ಯಕರಣಗೊಳಿಸಲು ಅಭಿಯಾನ : ತಾ. ಪಂ. ಇಒ ಆರ್.ಹೇಮಾವತಿ

ಹೆಣ್ಣುಮಕ್ಕಳು ಆಕರ್ಷಣೆಗೆ ಒಳಗಾಗದೆ ಶಿಕ್ಷಣಕ್ಕೆ  ಒತ್ತು ನೀಡಬೇಕು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌದರಿ 

ಕಳಪೆ ಕಾಮಗಾರಿ ಬಗ್ಗೆ  ದೂರುಗಳು ಬಂದಲ್ಲಿ ಅಧಿಕಾರಿಗಳನ್ನೇ ನೇರಹೊಣೆ ಮಾಡಬೇಕಾಗುತ್ತದೆ: ಶಾಸಕ ಬಿ.ಎನ್.ರವಿಕುಮಾ‌ರ್

ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ  ನಡೆದ ಶ್ರೀರೇಣುಕಾದೇವಿ ಎಲ್ಲಮ್ಮ  ಹೂವಿನ ಕರಗ ಮಹೋತ್ಸವ