--Ads--

ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಿ: ಸರ್ಕಲ್ ಇನ್ಸ್ಪೆಕ್ಟರ್ ಶ್ರೀನಿವಾಸ್

On: May 19, 2025 6:01 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಿ: ಸರ್ಕಲ್ ಇನ್ಸ್ಪೆಕ್ಟರ್ ಶ್ರೀನಿವಾಸ್

ಶಿಡ್ಲಘಟ್ಟ : ನಗರದಲ್ಲಿ ಮೊದಲಿನಿಂದಲೂ ಹಿಂದೂ-ಮುಸ್ಲಿಂ ಬಾಂಧವರಲ್ಲಿ ಶಾಂತಿ ಸೌಹಾರ್ದತ ನೆಲೆಸಿದ್ದು ಸಂತಸದ ವಿಷಯವಾಗಿದೆ‌ ಮುಂದೆಯೂ ಈ ರೀತಿಯ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಿ ಎಂದು ಸರ್ಕಲ್ ಇನ್ಸ್ಪೆಕ್ಟರ್ ಶ್ರೀನಿವಾಸ್ ತಿಳಿಸಿದರು.

ನಗರದ ನಗರ ಠಾಣೆಯಲ್ಲಿ ಮೇ-25 ರಂದು ನಡೆಯಲಿರುವ ಶ್ರೀರಾಮ ಶೋಭಾಯಾತ್ರೆ ಅಂಗವಾಗಿ ವಿವಿಧ ಧರ್ಮಗಳ ಮುಖಂಡರನ್ನು ಕರೆಸಿ ಶಾಂತಿ ಸಭೆಯನ್ನು ನಡೆಸಿ ಅವರು ಮಾತನಾಡಿದರು.

ಶ್ರೀರಾಮ ಶೋಭಾ ಯಾತ್ರೆ ಸಂದರ್ಭದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನದಟ್ಟಣೆ ಉಂಟಾಗದಂತೆ ಮತ್ತು ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಕಟ್ಟುನಿಟ್ಟಿನ ಕ್ರಮವಹಿಸಲಾಗಿದೆ, ಎಲ್ಲರೂ ಕಾನೂನು ಸುವ್ಯವ್ಯಸ್ಥೆಗೆ ಧಕ್ಕೆ ಬಾರದಂತೆ ನಡೆದುಕೊಳ್ಳಬೇಕು ಹಾಗು ಪ್ರತಿಯೊಬ್ಬರು ಪೋಲಿಸರಿಗೆ ಕೈ ಜೋಡಿಸಿ ಈ ಯಾತ್ರೆಯನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ನಗರ ರಾಣೆಯ ಎಸ್.ಐ.ವೇಣುಗೋಪಾಲ್ ಹಾಗು ವಿವಿಧ ಧರ್ಮಗಳ ಪ್ರಮುಖ ಮುಖಂಡರು ಹಾಜರಿದ್ದರು.

WhatsApp

Join Now

Telegram

Join Now

Instagram

Join Now