ಸ್ತ್ರೀಶಕ್ತಿಗಳ ಸಂಪೂರ್ಣ ಸಾಲ ಮನ್ನಾ ಮಾಡುವ ಶಕ್ತಿ ಕುಮಾರಣ್ಣನಿಗೆ ಮಾತ್ರ: ಮಾಜಿ ಸಚಿವೆ ಲೀಲಾವತಿ ಆರ್ ಪ್ರಸಾದ್…. ಜೆಡಿಎಸ್ ಅಭ್ಯರ್ಥಿ ನಿಸರ್ಗ ನಾರಾಯಣಸ್ವಾಮಿ ಪರ ಮತಯಾಚನೆ.
ಭಾರತ ದೇಶದಲ್ಲಿ ರೈತರ ಸಾಲ ಮನ್ನಾ ಮಾಡಿದ ಸರ್ಕಾರ ಯಾವುದಾದರೂ ಇದ್ದರೆ ಅದು ಜಾತ್ಯತೀತ ಜನತಾದಳ ಸರ್ಕಾರ ಎಂದು ಮಾಜಿ ಸಚಿವೆ ಲೀಲಾವತಿ ಆರ್ ಪ್ರಸಾದ್ ತಿಳಿಸಿದರು.
ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಅರದೇಶನಹಳ್ಳಿ ಗ್ರಾಮದಲ್ಲಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಸರ್ಗ ನಾರಾಯಣಸ್ವಾಮಿ ಅವರ ಪರ ಮತಯಾಚನೆ ಮಾಡುತ್ತಾ ನಾನು ಜೆಡಿಎಸ್ ಪಕ್ಷ ಉದಯ ಆದಾಗಿನಿಂದ ಇಲ್ಲಿವರೆಗೂ ಪಕ್ಷದಲ್ಲಿ ಇದ್ದೇನೆ. ಹೆಚ್ ಡಿ ಕುಮಾರಸ್ವಾಮಿ ಈ ಬಾರಿ ಮುಖ್ಯಮಂತ್ರಿಯಾಗಿ ಸ್ತ್ರೀಶಕ್ತಿ ಸಂಘಗಳ ಸಂಪೂರ್ಣ ಸಾಲ ಮನ್ನಾ ಮಾಡುತ್ತಾರೆ.
ರಾಜ್ಯದ ಮಹಿಳೆಯರ ಅಭಿವೃದ್ಧಿಗೆ ಇನ್ನೂ ಹಲವಾರು ಯೋಜನೆಗಳನ್ನು ಪಂಚ ರತ್ನ ಯೋಜನೆಗಳಲ್ಲಿ ಅಳವಡಿಸಿ ಕೊಂಡಿರುವ ಹೆಚ್ ಡಿ ಕುಮಾರಸ್ವಾಮಿ ಅವರು ಮಾತು ಕೊಟ್ಟಂತೆ ಅವುಗಳನ್ನು ಅನುಷ್ಠಾನಕ್ಕೆ ತರುತ್ತಾರೆ.
ರಾಜ್ಯದ ಅಭಿವೃದ್ಧಿ ಮತ್ತು ಕ್ಷೇತ್ರದ ಅಭಿವೃದ್ಧಿಗಾಗಿ ನೀವು ಜಾತ್ಯತೀತ ಜನತಾದಳಕ್ಕೆ ಮತವನ್ನು ನೀಡುವುದರ ಮೂಲಕ ಈ ಕ್ಷೇತ್ರದಲ್ಲಿ ನಿಸರ್ಗ ನಾರಾಯಣಸ್ವಾಮಿ ಅವರನ್ನು ಅತ್ಯಧಿಕ ಮತಗಳಿಂದ ಜಯಶೀಲರನ್ನಾಗಿ ಮಾಡಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕರುಗಳಾದ ಅರದೇಶನಹಳ್ಳಿ ಸೊಣ್ಣಪ್ಪ, ಕಾಮನಹಳ್ಳಿ ರಮೇಶ್ ಜೆಡಿಎಸ್ ಪಕ್ಷದ ಕುಂದಾಣ ಹೋಬಳಿ ಅಧ್ಯಕ್ಷ ಮನಗೊಂಡನಹಳ್ಳಿ ಜಗದೀಶ್ ಕಾಮೇನಹಳ್ಳಿ ರಮೇಶ್ ಹಾಗೂ ಪಕ್ಷದ ಮುಖಂಡರು ಹಾಜರಿದ್ದರು.