--Ads--

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ನಿರ್ದೇಶಕರಾಗಿ ಡಾಲ್ಫಿನ್ ನಾಗರಾಜ್ ಅವಿರೋಧ ಆಯ್ಕೆ.

On: May 24, 2025 9:31 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಕೋಲಾರ – ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ನಿರ್ದೇಶಕರಾಗಿ ಶಿಡ್ಲಘಟ್ಟದ ಡಾಲ್ಫಿನ್ ನಾಗರಾಜ್ ಅವಿರೋಧ ಆಯ್ಕೆ.

ಶಿಡ್ಲಘಟ್ಟ: ತಾಲ್ಲೂಕಿನ ಪ್ರಾಥಮಿಕ ಕೃಷಿ ಸಹಕಾರ ಪತ್ತಿನ ಸಂಘಗಳ ಕ್ಷೇತ್ರದಿಂದ ಎ.ನಾಗರಾಜ್ ಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾಗಿ ಅವಿರೋಧ ಆಯ್ಕೆಯಾಗಿದ್ದಾರೆ.

ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾಗಿ ಡಾಲ್ಫಿನ್ ಸ್ಕೂಲ್ ನಾಗರಾಜ್ ಅವಿರೋಧ ಆಯ್ಕೆಯಾಗಿದ್ದು ಅವರ ಅಭಿಮಾನಿಗಳು, ಬೆಂಬಲಿಗರು ನಗರದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ತಾಲ್ಲೂಕಿನ ಎಸ್‌ಎಫ್‌ಸಿಎಸ್ ಬ್ಯಾಂಕುಗಳ ಕ್ಷೇತ್ರದಿಂದ ಡಿಸಿಸಿ ಬ್ಯಾಂಕ್‌ನ ನಿರ್ದೇಶಕ ಸ್ಥಾನಕ್ಕೆ ಡಾಲ್ಫಿನ್ ಸ್ಕೂಲ್ ನಾಗರಾಜ್ ಮತ್ತು ದಿಬ್ಬೂರಹಳ್ಳಿಯ ಡಿ.ಎಚ್.ನಾಗರಾಜ್ ನಾಮ ಪತ್ರ ಸಲ್ಲಿಸಿದ್ದರು, ಡಿ.ಎಚ್.ನಾಗರಾಜ್ ತಮ್ಮ ನಾಮಪತ್ರ ವಾಪಸ್ ಪಡೆದಿದ್ದು ಡಾಲ್ಫಿನ್ ನಾಗರಾಜ್ ಮಾತ್ರ ಕಣದಲ್ಲಿ ಉಳಿದು ಅವಿರೋಧ ಆಯ್ಕೆಯಾಗಿದ್ಧಾರೆ.

ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಅವಿರೋಧ ಆಯ್ಕೆಯಾದ ನಾಗರಾಜ್ ಶಿಡ್ಲಘಟ್ಟಕ್ಕೆ ಆಗಮಿಸುತ್ತಿದ್ದಂತೆ ಅವರ ಅಭಿಮಾನಿಗಳು, ಬೆಂಬಲಿಗರು ನಗರದ ಕೋಟೆ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು,ನಾಗರಾಜ್‌ಗೆ ಮೈಸೂರು ಪೇಟ ತೊಡಿಸಿ ಶಾಲು ಹೊದಿಸಿ ಹೂ ಹಾರ ಹಾಕಿ ಅಭಿನಂದಿಸಿದರು.

ಈ ವೇಳೆ ಮಾತನಾಡಿದ ನಾಗರಾಜ್, ಡಿಸಿಸಿ ಬ್ಯಾಂಕ್‌ಗೆ ನನ್ನನ್ನು ಎಲ್ಲಾ ಪಕ್ಷದ ಮುಖಂಡರು ಕೂಡ ಅವಿರೋಧ ಆಯ್ಕೆ ಮಾಡಲು ಸಹಕರಿಸಿದ್ದಾರೆ,ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ಶಾಸಕ ಮೇಲೂರು ಬಿ.ಎನ್. ರವಿಕುಮಾರ್ ಸೇರಿದಂತೆ ಎಲ್ಲಾ ಕಾಂಗ್ರೆಸ್, ಜೆಡಿಎಸ್ , ಬಿಜೆಪಿ ಮುಖಂಡರು, ಎಸ್‌ಎಫ್‌ಸಿಎಸ್ ಬ್ಯಾಂಕುಗಳ ಅಧ್ಯಕ್ಷರು, ಕಾರ್ಯದರ್ಶಿಗಳು ನನಗೆ ಬೆಂಬಲ ನೀಡಿದ್ದು ಅವರ ನಿರೀಕ್ಷೆಯಂತೆ ಕಾರ್ಯನಿರ್ವಹಿಸುತ್ತೇನೆ ಎಂದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ರಾಜಕಾರಣಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದರೆ ದೇಶವು ಪ್ರಗತಪತದತ್ತ ಸಾಗಲಿದೆ : ಶಾಸಕ ಬಿ.ಎನ್.ರವಿಕುಮಾ‌ರ್

ಸುಂಡ್ರಹಳ್ಳಿಯ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಯೋಧರನ್ನು  ವಿವಿಧ ಸಂಘಟನೆಗಳಿಂದ ಸನ್ಮಾನ

ಜಿಕೆವಿಕೆ ವಿದ್ಯಾರ್ಥಿಗಳಿಂದ ಸಾಮಾಜಿಕ ಹಾಗೂ ಋತುಮಾನ ನಕ್ಷೆಗಳ ಪ್ರದರ್ಶನ

ಮಕ್ಕಳಲ್ಲಿ ಪ್ರಶ್ನಿಸುವ, ಚಿಂತಿಸುವ ಮತ್ತು ಸ್ವತಂತ್ರವಾಗಿ ಕಲಿಯುವ ಮನೋಭಾವ ಬೆಳೆಸಬೇಕು : ಉಪನ್ಯಾಸಕಿ ವಾಣಿ

ಪುಟ್ ಪಾತ್ ಒತ್ತವರಿ ತೆರವುಗೊಳಿಸಲು ಅಂಗಡಿ ಮಾಲಿಕರಿಗೆ ನಗರಠಾಣೆ ಪಿಎಸ್ಐ ಸೂಚನೆ

ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಆಕ್ಷೇಪಣೆಗಳನ್ನು ಸಲ್ಲಿಸಲು ಎರಡು ತಿಂಗಳ ಕಾಲಾವಕಾಶ ನೀಡಲಾಗುತ್ತದೆ : ಎಸ್.ಎಸ್.ಅಬೀದ್