ಮದ್ಯ ಪ್ರಿಯರಿಗೆ ಬಿಗ್ ಶಾಕ್….. ಎರಡು ದಿನ ಮದ್ಯ ಮಾರಾಟ ಬಂದ್.
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 07 (ಕರ್ನಾಟಕ ವಾರ್ತೆ):- 2023ರ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಮೇ 10 ರಂದು ಮತದಾನ ಹಾಗೂ ಮೇ 13 ರಂದು ಮತ ಎಣಿಕೆ ನಡೆಯಲಿರುವ ಹಿನ್ನೆಲೆ, ಮುಕ್ತ, ಶಾಂತಿಯುತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು, ಮೇ 08 ರಂದು ಸಂಜೆ 5:00 ಗಂಟೆಯಿಂದ ಮೇ 11 ರಂದು ಬೆಳಗ್ಗೆ 6.00 ಗಂಟೆಯವರೆಗೆ ಹಾಗೂ ಮೇ 13 ರಂದು ಬೆಳಗ್ಗೆ 6.00 ಗಂಟೆಯಿಂದ ಮೇ 14 ರ ಬೆಳಿಗ್ಗೆ 6.00 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಮದ್ಯ ಸಾಗಾಣಿಕೆ, ವಿತರಣೆ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಆದೇಶ ಹೊರಡಿಸಿದ್ದಾರೆ.