--Ads--

ಬಕ್ರೀದ್ ಪ್ರಯುಕ್ತ ಒಂಟೆ/ ಗೋವುಗಳ ಕಳ್ಳಸಾಗಣೆ, ಹತ್ಯೆ ನಿಷೇಧ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

On: June 7, 2025 7:53 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಬಕ್ರೀದ್ ಪ್ರಯುಕ್ತ ಒಂಟೆ/ ಗೋವುಗಳ ಕಳ್ಳಸಾಗಣೆ, ಹತ್ಯೆ ನಿಷೇಧ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಬೆಂ. ಜೂನ್,06: ಜಿಲ್ಲೆಯಲ್ಲಿ ಜೂನ್ 07 ರಂದು ಬಕ್ರೀದ್ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಒಂಟೆ ಅಥವಾ ಗೋವುಗಳ ಹತ್ಯೆ ಮಾಡುವುದು ಅಪರಾಧವಾಗಿದ್ದು, ಕಾನೂನು ಉಲ್ಲಂಘಿಸಿದಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ತಿಳಿಸಿದ್ದಾರೆ.

ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಹಾಗೂ ಇನ್ನಿತರೆ ದಿನಗಳಲ್ಲಿ ಕರ್ನಾಟಕದಾದ್ಯಂತ 13 ವರ್ಷದೊಳಗಿನ ಹಸು, ಕರು, ಎತ್ತು, ಹೋರಿ ಹಾಗೂ ಎಮ್ಮೆ ಮುಂತಾದ ಗೋವಾಂಶಾಧಿ ಜಾನುವಾರುಗಳ ಹತ್ಯೆಗಳು, ಹಾಗೇ ಇಂತಹ ಸಂದರ್ಭದಲ್ಲಿ ಪ್ರಾಣಿಗಳ ಕಳ್ಳ ಸಾಗಾಣಿಕೆ ಮಾಡುವುದು ಕಂಡುಬಂದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು, ಸಾರ್ವಜನಿಕರು ಹಬ್ಬದ ಸಂದರ್ಭದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳಗಳಲ್ಲಿ ಹಾಕದಂತೆ ಎಚ್ಚರಿಕೆ ವಹಿಸುವುದು ಕಡ್ಡಾಯವಾಗಿರುತ್ತದೆ.

ಯಾವುದೇ ಸಂದರ್ಭದಲ್ಲಿ ಉಲ್ಲಂಘನೆ ಮಾಡುವುದು ಕಂಡುಬಂದಲ್ಲಿ ಸಾರ್ವಜನಿಕರು ಜಿಲ್ಲಾಡಳಿತ, ಪಶುಸಂಗೋಪನೆ ಇಲಾಖೆ ಹಾಗೂ ಗ್ರಾಮ ಪಂಚಾಯಿತಿಗಳಿಗೆ ಮಾಹಿತಿಯನ್ನು ನೀಡಬಹುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp

Join Now

Telegram

Join Now

Instagram

Join Now