--Ads--

30 ಕ್ಕೆ ನಾಡಪ್ರಭು ಕೆಂಪೇಗೌಡ ಜಯಂತಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

On: June 9, 2025 9:50 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಜೂ.27 ಕ್ಕೆ ಆವತಿಯಿಂದ ಜ್ಯೋತಿ ಮೆರವಣಿಗೆ

30 ಕ್ಕೆ ನಾಡಪ್ರಭು ಕೆಂಪೇಗೌಡ ಜಯಂತಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 09 :ಜೂನ್ 27 ರಂದು ರಾಜ್ಯ ಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮಕ್ಕೆ ದೇವನಹಳ್ಳಿಯ ಆವತಿ ಗ್ರಾಮದಿಂದ ಜ್ಯೋತಿ ಹೊರಡಲಿದ್ದು ಜೂನ್ 30 ರಂದು ನಾಡಪ್ರಭು ಕೆಂಪೇಗೌಡ ಜಯಂತಿಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಕೆಂಪೇಗೌಡ ಜಯಂತಿ ಆಚರಣೆಯ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜೂನ್ 27 ರಂದು ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಹಿನ್ನೆಲೆ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಬೆಂಗಳೂರಿನ ಬಾಬು ಜಗಜೀವನರಾಂ ಭವನದಲ್ಲಿ ಆಯೋಜಿಸಲಾಗಿದ್ದು ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮದಿಂದ ಬೆಳಿಗ್ಗೆ 08:30 ಗಂಟೆಗೆ ನಾಡಪ್ರಭು ಕೆಂಪೇಗೌಡ ಜ್ಯೋತಿಯು ಹೊರಡಲಿದೆ.

ಜೂನ್ 27 ರಂದು ನಾಡಪ್ರಭು ಕೆಂಪೇಗೌಡ ಜ್ಯೋತಿ ರಥ ಯಾತ್ರೆ ಕಾರ್ಯಕ್ರಮ ಇರುವುದರಿಂದ, ಆ ದಿನ ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಹೊರಡಬೇಕಿದೆ. ಹಾಗಾಗಿ ಜಿಲ್ಲಾ ಮಟ್ಟದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಜೂನ್ 30 ರಂದು ಆಚರಿಸಲು ನಿರ್ಧರಿಸಲಾಗಿದ್ದು, ಜಿಲ್ಲಾಡಳಿತದಿಂದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದರು.

ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಬೇಕು. ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಪುತ್ಥಳಿ, ವೇದಿಕೆ ಅಲಂಕಾರ ವ್ಯವಸ್ಥೆ, ಕುಡಿಯುವ ನೀರು, ಊಟೋಪಚಾರ ಸುವ್ಯವಸ್ಥಿತವಾಗಿ ಆಗಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಶಾಲಾ ಕಾಲೇಜು ಮಕ್ಕಳಿಗೆ ಪ್ರಬಂಧ, ಚರ್ಚಾ ಸ್ಪರ್ಧೆ ಏರ್ಪಡಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ, ಎಸ್ಸೆಸ್ಸೆಲ್ಸಿ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವೇದಿಕೆಯಲ್ಲಿ ಸನ್ಮಾನಿಸಲಾಗುವುದು ಅದಕ್ಕಾಗಿ ಪಟ್ಟಿ ಸಿದ್ಧಪಡಿಸಿ ಎಂದು ಶಾಲಾ ಶಿಕ್ಷಣ ಇಲಾಖೆ ಗೆ ಸೂಚಿಸಿದರು.

ಜಿಲ್ಲಾ ಮಟ್ಟದ ಕಾರ್ಯಕ್ರಮ ದಿನದಂದು ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಯಿಂದ ನಾಡಪ್ರಭು ಕೆಂಪೇಗೌಡರ ಪಲ್ಲಕ್ಕಿ ಮೆರವಣಿಗೆ ಹೊರಡಲಿದ್ದು ತಾಲ್ಲೂಕು ಇಒ ಹಾಗೂ ತಹಶೀಲ್ದಾರ್ ಗಳು ಅಗತ್ಯ ಕ್ರಮ ವಹಿಸಿ ಎಂದರು.

ನಾಡಪ್ರಭು ಕೆಂಪೇಗೌಡ ಜ್ಯೋತಿ ರಥಯಾತ್ರೆ ಕಾರ್ಯಕ್ರಮಕ್ಕೆ ಹಾಗೂ ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಸಂಘ ಸಂಸ್ಥೆಗಳು, ಸ್ತ್ರೀ ಶಕ್ತಿ ಸಂಘಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಕೋರಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಜಿಪಂ ಉಪಕಾರ್ಯದರ್ಶಿ ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಸದಸ್ಯರು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now