--Ads--

ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ.

On: May 8, 2023 5:52 PM
Follow ಮಾಡಿ
--Ads--

Whatsapp Channel

Join Now

Telegram Group

Join Now
  • ಬೆಂಗಳೂರು ಗ್ರಾಮಾಂತರ ಜಿಲ್ಲೆ,.

2022-23ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 96.48 ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ ನಾಲ್ಕನೇ ಸ್ಥಾನ ಪಡೆದಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.

ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಜಿಲ್ಲೆಯಲ್ಲಿ 13630 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 13 ಮಂದಿ ಪರೀಕ್ಷೆಗೆ ಗೈರು ಹಾಜರಾಗಿದ್ದರು.

ಪರೀಕ್ಷೆಗೆ ಹಾಜರಾಗಿದ್ದ 13617 ವಿದ್ಯಾರ್ಥಿಗಳಲ್ಲಿ 13138 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 466 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ.ನೆಲಮಂಗಲ ತಾಲ್ಲೂಕಿನ ಸೆಂಚುರಿ ಪ್ರೌಢಶಾಲೆಯ ವಿದ್ಯಾರ್ಥಿ ನಿಶಾಂತ್ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625 ಅಂಕಗಳಿಗೆ 624 ಅಂಕಗಳನ್ನು ಪಡೆಯುವ ಮೂಲಕ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಕಳೆದ ವರ್ಷ 2021-22ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 93.31 ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ ಏಂಟನೇ ಸ್ಥಾನ ಪಡೆದಿತ್ತು. ಕಳೆದ ವರ್ಷಕ್ಕೆ ಹೋಲಿಸಿದ್ದಲ್ಲಿ ಜಿಲ್ಲೆಯ ಫಲಿತಾಂಶ ಶೇ. 3.17 ರಷ್ಟು ಹೆಚ್ಚಳವಾಗಿದ್ದು ಪ್ರಸಕ್ತ ವರ್ಷ ನಾಲ್ಕನೇ ಸ್ಥಾನ ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ  ತಿಳಿಸಿದ್ದಾರೆ.

WhatsApp

Join Now

Telegram

Join Now

Instagram

Join Now