--Ads--

ಶಿಡ್ಲಘಟ್ಟ ತಾಲ್ಲೂಕಿನ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ಸಿಗಬಹುದೆಂದು ನಿರೀಕ್ಷೆ: ಶಾಸಕ ಬಿಎನ್ ರವಿಕುಮಾರ್ 

On: June 17, 2025 6:02 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಶಿಡ್ಲಘಟ್ಟ  ತಾಲ್ಲೂಕಿನ ಕಿನ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ಸಿಗಬಹುದೆಂದು ನಿರೀಕ್ಷೆ: ಶಾಸಕ ಬಿಎನ್ ರವಿಕುಮಾರ್

ಶಿಡ್ಲಘಟ್ಟ : ಜೂನ್-19 ರಂದು ಜಿಲ್ಲೆಯ ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ತಾಲ್ಲೂಕಿನ ಅಭಿವೃದ್ಧಿಗಾಗಿ ಹೆಚ್ಚಿನ ಸಹಕಾರ ಸಿಗಬಹುದೆಂದು ನಿರೀಕ್ಷೆಯನ್ನು ಇಟ್ಟುಕೊಂಡಿದ್ದು, ಹಲವು ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಲಾಗಿದೆ ಎಂದು ಶಾಸಕರಾದ ಬಿ.ಎನ್.ರವಿಕುಮಾ‌ರ್ ತಿಳಿಸಿದರು.

ತಾಲ್ಲೂಕಿನ ಮೇಲೂರು ಗ್ರಾಮದ ನಿವಾಸದಲ್ಲಿ ಅವರು ಮಾತನಾಡಿ, ತಾಲ್ಲೂಕಿನಲ್ಲಿ ತುರ್ತಾಗಿ 100 ಹಾಸಿಗೆಗಳ ಸಾಮರ್ಥ್ಯದ ಸುಸಜ್ಜಿತ ಆಸ್ಪತ್ರೆ, ರಸ್ತೆಗಳ ನಿರ್ಮಾಣಕ್ಕೆ ಅನುದಾನ ನೀಡಬೇಕು, ಈಗಾಗಲೇ ಎಚ್‌.ಎನ್‌.ವ್ಯಾಲಿ ಯೋಜನೆಯಡಿ ಜಿಲ್ಲೆಯ ಕೆರೆಗಳಿಗೆ ಹರಿಯುತ್ತಿರುವ ನೀರನ್ನು ಮೂರನೇ ಹಂತದಲ್ಲಿ ಶುದ್ದೀಕರಣ ಮಾಡಿ, ಹರಿಸಬೇಕು, ಎತ್ತಿನಹೊಳೆ ಯೋಜನೆಯನ್ನು ಶೀಘ್ರವಾಗಿ ಅನುಷ್ಟಾನಗೊಳಿಸಿ, ಬಯಲುಸೀಮೆ ಭಾಗದಲ್ಲಿನ ಕೆರೆಗಳನ್ನು ತುಂಬಿಸುವ ಮೂಲಕ ನೀರಿನ ಕೊರತೆಯನ್ನು ನೀಗಿಸಬೇಕು ಎಂದು ಸರ್ಕಾರಕ್ಕೆ ಮನವಿ ನೀಡಲಾಗಿದೆ.

ನಮ್ಮ ಬಾಗದಲ್ಲಿ ದ್ರಾಕ್ಷಿ, ರೇಷ್ಮೆ,ಹಾಲು,ಮಾವು, ಗೋಡಂಬಿ ಹಾಗು ವಿವಿಧ ರೀತಿಯ ತರಕಾರಿಗಳನ್ನು ಬೆಳೆಯಲಾಗುತ್ತಿದ್ದು ಮಾರುಕಟ್ಟೆ ಧರ ಏರುಪೇರಾದಾಗ ಸರ್ಕಾರ ರೈತರ ನೆರವಿಗೆ ತಕ್ಷಣ ಸ್ಪಂದಿಸಿ ಕ್ರಮವಹಿಸಬೇಕು ಎಂದರು.

ನಮ್ಮ ತಾಲ್ಲೂಕು ತೀರಾ ಹಿಂದುಳಿದ ತಾಲ್ಲೂಕಾಗಿದ್ದು ಹಿಂದಿನಿಂದಲೂ ನಿರ್ಲಕ್ಷ್ಯಕ್ಕೆ ಒಳಗಾಗಿದೆ ಇಂತಹ ಹಿಂದುಳಿದಿರುವ ತಾಲ್ಲೂಕಿಗೆ ಹೆಚ್ಚಿನ ಅನುದಾನ ಸಿಗಬೇಕು ಎನ್ನುವುದು ನನ್ನ ಬೇಡಿಕೆಯಾಗಿದೆ ಎಂದರು.
ಶಿಕ್ಷಣ, ಆರೋಗ್ಯ, ನೀರಾವರಿ, ಕೃಷಿ ಕ್ಷೇತ್ರಗಳು ಗಣನೀಯವಾಗಿ ಅಭಿವೃದ್ಧಿ ಕಾಣಬೇಕು, ರೈತಾಪಿ ವರ್ಗದವರು ಆರ್ಥಿಕವಾಗಿ ಸಬಲರಾಗಬೇಕು ಎನ್ನುವ ಸದುದ್ದೇಶದಿಂದ ಕೆಲಸ ಮಾಡಲಾಗುತ್ತಿದೆ ಬಹಷ್ಟು ಬೇಡಿಕೆಗಳಿದ್ದರೂ, ಬೇರೆ ಕ್ಷೇತ್ರಗಳಿಗೂ ಅನುಕೂಲವಾಗಬೇಕು ಎನ್ನುವ ಉದ್ದೇಶದಿಂದ ತೀರಾ ಅನಿವಾರ್ಯವಾಗಿರುವ ಬೇಡಿಕೆಗಳನ್ನು ಮಾತ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಅವರು ಹೇಳಿದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಹಣಕಾಸು ಇಲಾಖೆ ಮುಖ್ಯ ಕಾರ್ಯದರ್ಶಿ ಅವರ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್  ಸಭೆ ನಡೆಸಲಿದ್ದು ಈ ಸಭೆಯಲ್ಲಿ ಜಿಲ್ಲೆಯ ಶಾಸಕರು ಸಹ ಭಾಗಿಯಾಗಲಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.ಈ ಸಭೆಯಲ್ಲಿ ಆಯಾ ತ ಶಾಸಕರು ಸಲ್ಲಿಸಿರುವ ಬೇಡಿಕೆಗಳು, ಅವುಗಳ ಸಾಧಕ, ಬಾಧಕಗಳ ಬಗ್ಗೆ ಚರ್ಚೆ ನಡೆಯುತ್ತದೆ ಎನ್ನಲಾಗುತ್ತಿದೆ.

WhatsApp

Join Now

Telegram

Join Now

Instagram

Join Now