ಜಲ ಶಕ್ತಿ ಅಭಿಯಾನ ಕೇಂದ್ರಿಯ ನೋಡಲ್ ಅಧಿಕಾರಿ ಜಿಲ್ಲೆಗೆ ಭೇಟಿ
ವಿಜಯ ದರ್ಪಣ ನ್ಯೂಸ್…
ಜಲ ಶಕ್ತಿ ಅಭಿಯಾನ ಕೇಂದ್ರಿಯ ನೋಡಲ್ ಅಧಿಕಾರಿ ಜಿಲ್ಲೆಗೆ ಭೇಟಿ
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಜೂನ್ : ಜಲ ಶಕ್ತಿ ಅಭಿಯಾನ’ ಕ್ಯಾಚ್ ದ ರೈನ್’ 2025 ನೇ ಸಾಲಿನ ಕೇಂದ್ರಿಯ ನೋಡಲ್ ಅಧಿಕಾರಿ ಅನೇಶ್ ಪಿ ರಾಜನ್ ಅವರು ಇಂದು ಜಿಲ್ಲೆಗೆ ಭೇಟಿ ನೀಡಿ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಲ ಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್(ಗ್ರಾಮೀಣ) ಯೋಜನೆ ಅನುಷ್ಠಾನಕ್ಕೆ
ಸಂಬಂಧಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಕೆಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಜಲ ಜೀವನ್ ಮಿಷನ್(ಗ್ರಾಮೀಣ) ಮತ್ತು ಸ್ವಚ್ಛ ಭಾರತ್ ಮಿಷನ್(ಗ್ರಾಮೀಣ) ಕಾರ್ಯಕ್ರಮಗಳು ರಾಜ್ಯಗಳಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಎರಡೂ ಯೋಜನೆಗಳ ಸಮರ್ಪಕ ಅನುಷ್ಠಾನ ಮತ್ತು ಯೋಜನೆಗಳ ಕಾರ್ಯಾಚರಣೆಯ ಸುಸ್ಥಿರತೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳಡಿ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಿರುವ ಯೋಜನೆಗಳು ಹಾಗೂ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ ವಿವರ ಪಡೆದುಕೊಂಡರು.
ಈ ಸಂದರ್ಭದಲ್ಲಿ ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಉಪವಿಭಾಗಾಧಿಕಾರಿ ದುರ್ಗಶ್ರೀ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಶ್ರೀಕಾಂತ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಕಲಾವತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.