ನಮ್ಮಸರ್ಕಾರ ಐದು ವರ್ಷ ಭದ್ರವಾಗಿರುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಜಯ ದರ್ಪಣ ನ್ಯೂಸ್……
ನಮ್ಮಸರ್ಕಾರ ಐದು ವರ್ಷ ಭದ್ರವಾಗಿರುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ತಾಂಡವಪುರ ಮೈಸೂರು , ಜೂನ್ 30: ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೂ ಹೇಳಿದರು ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ನಮ್ಮಿಬ್ಬರ ನಡುವೆ ತಂದಾಕುವ ಕೆಲಸವನ್ನು ನಾವು ಕೇಳುವುದಿಲ್ಲ. ಸರ್ಕಾರ ಐದು ವರ್ಷ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಅವರು ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ
*ಸುರ್ಜೆವಾಲಾ ಅಭಿಪ್ರಾಯ ಪಡೆಯಲಿದ್ದಾರೆ*
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿ ಸುರ್ಜೆವಾಲಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ಮಾತನಾಡಿ ಅವರು ಅಭಿಪ್ರಾಯ ಕೇಳಿ, ಅವರ ಕೆಲಸವನ್ನು ಮಾಡುತ್ತಾರೆ ಎಂದರು.
*ಬಿಜೆಪಿ ಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು*
ಸಿದ್ದರಾಮಯ್ಯ ಅವರು ಈ ಬಾರಿಯ ದಸರಾ ಉದ್ಘಾಟಿಸುವುದಿಲ್ಲ ಎಂದು ಬಿಜೆಪಿಯವರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಶ್ರೀರಾಮುಲು ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಅವರು ಹೇಗೆ ಭವಿಷ್ಯ ನುಡಿಯುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ವ್ಯಂಗ್ಯ ಭರಿತವಾಗಿ ವಿರೋಧ ಪಕ್ಷದವರನ್ನು ಪ್ರಶ್ನೆ ಮಾಡಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಡಾಕ್ಟರ್ ಹೆಚ್ ಸಿ ಮಹದೇವಪ್ಪ ಕೆ ವೆಂಕಟೇಶ್ ಬೋಸರಾಜ್ ಎನ್ ಚೆಲುವರಾಯಸ್ವಾಮಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾಕ್ಟರ್ ಬಿ ಜೆ ವಿಜಯ್ ಕುಮಾರ್ ಹಾಗೂ ಶಾಸಕರು ಅಧಿಕಾರಿಗಳು ಮುಖಂಡರು ಹಾಜರಿದ್ದರು