ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ.85% ಮತದಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮೇ 10 ರಂದು ನಡೆದ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ. 85% ರಷ್ಟು ಮತದಾನವಾಗಿರುವುದಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಆರ್ ಲತಾ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಸುಗಮ ಹಾಗೂ ಶಾಂತಿಯುತವಾಗಿ ನಡೆದಿರುವುದಾಗಿ ಅವರು ತಿಳಿಸಿದ್ದಾರೆ. ನಾಲ್ಕು ವಿಧಾನಸಭಾ ಕ್ಷೇತ್ರಗಳ ಮತದಾನದ ಶೇಕಡಾವಾರು ವಿವರಹೊಸಕೋಟೆ ವಿಧಾನಸಭಾ ಕ್ಷೇತ್ರ: 90.86%, ದೇವನಹಳ್ಳಿ ವಿಧಾನಸಭಾ ಕ್ಷೇತ್ರ: 84.61%, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ: 84.30%,  ನೆಲಮಂಗಲ ವಿಧಾನಸಭಾ ಕ್ಷೇತ್ರ: 79.60%