ಸಂಸದ ಡಾ.ಕೆ ಸುಧಾಕರ್ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

ವಿಜಯ ದರ್ಪಣ ನ್ಯೂಸ್….

 ಸಂಸದ ಡಾ.ಕೆ ಸುಧಾಕರ್ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

ದೊಡ್ಡಬಳ್ಳಾಪುರ ಬೆಂ.ಗ್ರಾ ಜಿಲ್ಲೆ ಜುಲೈ,17:- ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗರಿಗಳಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸಂಸದ ಡಾ.ಕೆ ಸುಧಾಕರ್ ಅವರು ಶಂಕುಸ್ಥಾಪನೆ ನೆರವೇರಿಸಿದರು.

ದೊಡ್ಡಬಳ್ಳಾಪುರ ಟೌನ್ ವಾರ್ಡ್ ನಂ 15 ವ್ಯಾಪ್ತಿಯ ರಂಗಪ್ಪ ಸರ್ಕಲ್ ಹಾಗೂ ವಾರ್ಡ್ ನಂ 04 ರ ಐ.ಬಿ ಸರ್ಕಲ್ ಬಳಿ ನೂತನ ಬಸ್ ತಂಗುದಾಣ, ಕೊಡಿಗೆಹಳ್ಳಿ ಹಾಗೂ ನಾಗಸಂದ್ರ ಗ್ರಾಮಗಳಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಹೈಮಾಸ್ಕ್ ವಿದ್ಯುತ್ ದೀಪಗಳನ್ನು ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಿದರು.

ದೊಡ್ಡಬೆಳವಂಗಲ ಗ್ರಾಮದಲ್ಲಿ ಆರ್‌ಸಿಸಿ ಕಟ್ಟಡದೊಂದಿಗೆ ನಿರ್ಮಿಸಲಾಗುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಬಸ್ ತಂಗುದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಹುಲಿಕುಂಟೆ ಗ್ರಾಮದಲ್ಲಿ ಹೈಮಾಸ್ಟ್ ದೀಪ ಅಳವಡಿಕೆ, ಬನವತಿ ಗ್ರಾಮದಲ್ಲಿ ಆರ್‌ಸಿಸಿ ಕಟ್ಟಡದೊಂದಿಗೆ ನಿರ್ಮಿಸಲಾಗುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಬೀಡಿಕೆರೆ ಗ್ರಾಮದಲ್ಲಿ ಬಸ್ ತಂಗುದಾಣ ನಿರ್ಮಾಣ ಕಾಮಗಾರಿಗಳಿಗೆ ಸಂಸದರು ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ನಾನು ಬದ್ಧನಾಗಿದ್ದು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಒದಗಿಸುವುದು ನನ್ನ ಆದ್ಯತೆಯಾಗಿದೆ. ಈ ಎಲ್ಲಾ ಯೋಜನೆಗಳು ನಿಗದಿತ ಸಮಯದಲ್ಲಿ ಪೂರ್ಣಗೊಳ್ಳಲಿವೆ,” ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಧೀರಜ್ ಮುನಿರಾಜು, ಸ್ಥಳೀಯ ಮುಖಂಡರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.