ರೈತರ ಒಪ್ಪಿಗೆ ಇಲ್ಲದೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸರ್ಕಾರ ತಡೆ ನೀಡಬೇಕು
ವಿಜಯ ದರ್ಪಣ ನ್ಯೂಸ್…
ರೈತರ ಒಪ್ಪಿಗೆ ಇಲ್ಲದೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸರ್ಕಾರ ತಡೆ ನೀಡಬೇಕು
ಶಿಡ್ಲಘಟ್ಟ : ತಾಲ್ಲೂಕಿನ ಜಂಗಮಕೋಟೆ ಹೋಬಳಿಯಲ್ಲಿ ರೈತರ ಒಪ್ಪಿಗೆ ಇಲ್ಲದೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸರ್ಕಾರ ತಡೆ ನೀಡಬೇಕು ,ರೈತರ ಪಂಪ್‌ಸೆಟ್‌ಗಳಿಗೆ ನಿರಂತರ 7 ಗಂಟೆ ವಿದ್ಯುತ್ ಸರಬರಾಜು, ಗುಂಡುತೋಪುಗಳ ಒತ್ತುವರಿ ತೆರವುಗೊಳಿಸಿ ಗಿಡ ನೆಡುವುದರ ಜತೆಗೆ ರೈತರ ಸಮಸ್ಯೆಗಳನ್ನು ಪರಿಹರಿಸಲು ರೈತರ ಸಭೆ ಕರೆಯಬೇಕು ಎಂದು ರೈತ ಸಂಘದ ತಾಲ್ಲೂಕು ಅಧ್ಯಕ್ಷ ಎಸ್.ಎಂ.ರವಿಪ್ರಕಾಶ್ ತಿಳಿಸಿದರು.
ಬಿತ್ತನೆ ಬೀಜ, ರಸಗೊಬ್ಬರ ವಿತರಣೆ ಸೇರಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘ (ಕೆ.ಎಸ್.ಪುಟ್ಟಣ್ಣಯ್ಯ ಬಣ)ದ ಪದಾಧಿಕಾರಿಗಳು ತಾಲ್ಲೂಕು ಕಛೇರಿಯಲ್ಲಿ ತಹಸೀಲ್ದಾರ್ ಗಗನಸಿಂಧು ಅವರಿಗೆ ಮನವಿ ಸಲ್ಲಿಸಿದರು.
ಇತ್ತೀಚಿನ ದಿನಗಳಲ್ಲಿ ಮಳೆ ಉತ್ತಮವಾಗಿದ್ದು ಕೃಷಿ ಇಲಾಖೆ ಹಾಗೂ ಖಾಸಗಿ ಅಂಗಡಿಗಳಲ್ಲಿ ಗೊಬ್ಬರ ಮತ್ತು ಬೀಜ ಹಂಚಿಕೆಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಕೆರೆ ಮತ್ತು ರಾಜಕಾಲುವೆಗಳು ಒತ್ತುವರಿಯಾಗಿದ್ದು, ಒತ್ತುವರಿ ತೆರವುಗೊಳಿಸಿ, ಸರಾಗವಾಗಿ ನೀರು ಹರಿಯಲು ಕ್ರಮ ಕೈಗೊಳ್ಳಬೇಕು ಎಂದರು.
10-15 ವರ್ಷಗಳಿಂದ ಸಾಗುವಳಿ ಚೀಟಿ ಕೊಡದೆ, 30 ವರ್ಷಗಳಿಂದ ದುರಸ್ತಿ ಮಾಡದಿರುವುದರಿಂದ ರೈತರು ತಾಲ್ಲೂಕು ಕಚೇರಿಗೆ ತಿರುಗುವಂತಾಗಿದ್ದು, ತಕ್ಷಣ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಟಿ.ಕೆ.ಅರುಣ್ ಕುಮಾರ್, ಜಿಲ್ಲಾ ಗೌರವಾಧ್ಯಕ್ಷ ಭಕ್ತರಹಳ್ಳಿ ಕೋಟೆ ಚನ್ನೇಗೌಡ, ಶಂಕರನಾರಾಯಣ,ಕೃಷ್ಣಪ್ಪ, ದ್ಯಾವಪ್ಪ,ರಾಮಾಂಜಿ, ಶ್ರೀನಾಥ್, ನಾರಾಯಣಸ್ವಾಮಿ, ಲಗುಮಪ್ಪ,ಲೋಕೇಶ್, ಶ್ರೀನಿವಾಸ್, ಮನೋಜ್ ಕುಮಾರ್,ನಾಗರಾಜ, ಗೌತಮ್ ಮುಂತಾದವರು ಪಾಲ್ಗೊಂಡಿದ್ದರು.